– ಪಾಕ್ ಪ್ರಧಾನಿಯೊಂದಿಗೆ ಭೋಜನಕೂಟದಲ್ಲಿ ಭಾಗಿ
ನವದೆಹಲಿ: ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ( S Jaishankar) ಮಂಗಳವಾರ (ಅ.15) ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಕಳೆದ 9 ವರ್ಷಗಳಲ್ಲಿ ಅಂದ್ರೆ 2015ರಿಂದ ಇದೇ ಮೊದಲಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು ಪಾಕ್‌ಗೆ ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ.
Advertisement
ಚೀನಾದ ಪ್ರಧಾನಿ ಲಿ ಕ್ವಿಯಾಂಗ್, ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಮತ್ತು ಜೈಶಂಕರ್ ಭಾಗಿಯಾಗಲಿದ್ದಾರೆ. ಬುಧವಾರದ ಮುಖ್ಯ ಶೃಂಗಸಭೆಯ ಮೊದಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಆಯೋಜಿಸುವ ಸ್ವಾಗತ ಭೋಜನ ಕೂಟದಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಕೇಸ್ – ಮೂರನೇ ಆರೋಪಿ ಅರೆಸ್ಟ್
Advertisement
Advertisement
ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೂಚ್ ಮಾತನಾಡಿ, ಜೈಶಂಕರ್ ಅವರ ಪಾಕಿಸ್ತಾನ ಭೇಟಿಯು ಮಹತ್ವ ಪಡೆದುಕೊಳ್ಳುತ್ತದೆ. ಏಕೆಂದರೆ ಇದು ನವದೆಹಲಿಯ ಕಡೆಯಿಂದ ಪ್ರಮುಖ ನಿರ್ಧಾರವಾಗಿದೆ. ಪುಲ್ವಾಮಾ ದಾಳಿ, ಬಾಲಾಕೋಟ್ ಏರ್‌ಸ್ಟ್ರೈಕ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟವು. ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ನೆರೆಯ ಸಂಬಂಧವನ್ನು ಬಯಸುತ್ತದೆ ಎಂದು ಹೇಳುತ್ತಾ ಬಂದಿದೆ. ಆದ್ದರಿಂದ ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಇಸ್ಲಾಮಾಬಾದ್‌ಗೆ ಇದೆ ಎಂದರು. ಇದನ್ನೂ ಓದಿ: ಟ್ರಂಪ್‌ಗಿಂತಲೂ ಕಮಲಾ ಹ್ಯಾರಿಸ್‌ಗೆ ಹೆಚ್ಚಿನ ಕೋಟ್ಯಧಿಪತಿಗಳ ಬೆಂಬಲ – ಇಲ್ಲಿದೆ ಬಿಲಿಯನೇರ್ಸ್ ಲಿಸ್ಟ್
Advertisement
ಎಸ್‌ಸಿಒ ಸದಸ್ಯ ರಾಷ್ಟ್ರಗಳ ಸರ್ಕಾರದ ಮುಖ್ಯಸ್ಥರ 23 ನೇ ಸಭೆಯು ಇಸ್ಲಾಮಾಬಾದ್‌ನಲ್ಲಿ ಅಕ್ಟೋಬರ್ 15 ಮತ್ತು 16 ರಂದು ನಡೆಯಲಿದ್ದು, ಅಧಿಕಾರಿಗಳು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ಭಾರತದ ನಾಲ್ಕು ಸದಸ್ಯರ ಅಧಿಕೃತ ನಿಯೋಗವೂ ಪಾಕಿಸ್ತಾನಕ್ಕೆ ಆಗಮಿಸಿದೆ ಎಂದು ಮೂಲಗಳು ವರದಿ ಮಾಡಿದೆ. ಚೀನಾದ 15 ಸದಸ್ಯರು, ಕಿರ್ಗಿಸ್ತಾನದ 4 ಸದಸ್ಯರು ಮತ್ತು ಇರಾನ್‌ನ ಇಬ್ಬರು ಸದಸ್ಯರ ನಿಯೋಗವೂ ಇಸ್ಲಾಮಾಬಾದ್ ತಲುಪಿದೆ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಕೇಸ್ – ಕೃತ್ಯದ ಬಳಿಕ ಭದ್ರತಾ ಸಿಬ್ಬಂದಿ ಮೇಲೆ ಖಾರದ ಪುಡಿ ಎರಚಿ ಪರಾರಿಯಾಗಿದ್ದ ಆರೋಪಿಗಳು
ಇಸ್ಲಾಮಾಬಾದ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲೀಸ್ (ಐಜಿಪಿ) ನಾಸಿರ್ ಅಲಿ ರಿಜ್ವಿ ಅವರು ಮಾತನಾಡಿ, ಫೆಡರಲ್ ರಾಜಧಾನಿಯಲ್ಲಿ ಶೃಂಗ ಸಭೆಗಾಗಿ ಭಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ. ಪಾಕಿಸ್ತಾನ ಸೇನೆ, ಗುಪ್ತಚರ ಸಂಸ್ಥೆಗಳು, ಫ್ರಾಂಟಿಯರ್ ಕಾರ್ಪ್ಸ್ (ಎಫ್‌ಸಿ) ಮತ್ತು ರೇಂಜರ್‌ಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವುದರೊಂದಿಗೆ ಶೋಧ ಮತ್ತು ಮಾಹಿತಿ ಆಧಾರಿತ ಕಾರ್ಯಾಚರಣೆಗಳು ನಡೆಯುತ್ತಿವೆ. ಭದ್ರತೆಗಾಗಿ 9 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿ – ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
9 ವರ್ಷಗಳಲ್ಲಿ ಇದೇ ಮೊದಲು:
ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಎಸ್‌ಸಿಒ ಶೃಂಗಸಭೆಗೆ ಆಹ್ವಾನಿಸಿತ್ತು. ಆದರೆ ಡಿಸೆಂಬರ್ 2015 ರಿಂದ ಯಾವುದೇ ಭಾರತೀಯ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ. ದಿವಂಗತ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 2015 ರಲ್ಲಿ ಅಫ್ಘಾನಿಸ್ತಾನದ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲು ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದರು. ಇದನ್ನೂ ಓದಿ: ಗುಜರಾತ್‌ನಲ್ಲಿ 5,000 ಕೋಟಿ ಮೌಲ್ಯದ ಕೊಕೇನ್ ಸೀಜ್