ಚಿಕ್ಕಮಗಳೂರು: ಸ್ವಿಫ್ಟ್ ಕಾರು (Car) ಹಾಗೂ ಸ್ಕೂಟಿ (Scooty) ಮುಖಾಮುಖಿ ಡಿಕ್ಕಿ ಆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ಮೃತರನ್ನ ಅಜೀಮ್ (23) ಹಾಗೂ ಬಿಲಾಲ್ (20) ಎಂದು ಗುರುತಿಸಲಾಗಿದೆ. ಮೃತರಿಬ್ಬರು ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದು, ಕೆಲಸಕ್ಕಾಗಿ ಅಜ್ಜಂಪುರ ತಾಲೂಕಿನ ಹುಣಸಘಟ್ಟ ಗ್ರಾಮಕ್ಕೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಹುಣಸಘಟ್ಟಕ್ಕೆ ಹೋಗುವಾಗ ಮಾರ್ಗ ಮಧ್ಯೆ ಅಜ್ಜಂಪುರದ ಕಡೆಯಿಂದ ತರಿಕೆರೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಸ್ಕೂಟಿ ಮುಖಾಂತರ ಡಿಕ್ಕಿಯಾಗಿದೆ. ಅಪಘಾತದ (Accident) ತೀವ್ರತೆಯಿಂದಾಗಿ ಹದಿಹರೆಯದ ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕರ್ಪೂರ ಬೆಳಗಿ, ಈಡುಗಾಯಿ ಹೊಡೆದು ಸರ್ಕಾರಿ ವಾಹನ ಬೀಳ್ಕೊಟ್ಟ ಸಚಿವ ನಾರಾಯಣಗೌಡ
ಕಾರು-ಸ್ಕೂಟಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಕಾರು ಚಾಲಕ ಕಾರನ್ನ ಬಿಟ್ಟು ಓಡಿ ಹೋಗಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ತರೀಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಪೂರ್ಣ ಬಹುಮತ : ಎಬಿಪಿ ಸಿ- ವೋಟರ್ ಸಮೀಕ್ಷೆ


