Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

Latest

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

Public TV
Last updated: December 11, 2023 11:55 am
Public TV
Share
2 Min Read
supreme Court 1
SHARE

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu Kashmir) ಸಂವಿಧಾನದ 370ನೇ ವಿಧಿಯ (Article 370) ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು (Special Status) ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್‌ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್‌ 30ರ ಒಳಗಡೆ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ  ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಸರ್ವಾನುಮತದ ತೀರ್ಪು ಪ್ರಕಟವಾಗಿದೆ.

ತೀರ್ಪು ಓದಿದ ಸಿಜೆಐ ಚಂದ್ರಚೂಡ್‌ ಅವರು, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಭಾರತದ ಸಂವಿಧಾನದ 1 ಮತ್ತು 370 ನೇ ವಿಧಿಗಳಿಂದ ಸ್ಪಷ್ಟವಾದಂತೆ ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಆರ್ಟಿಕಲ್ 370 ವಿಧಿಸಿದ್ದು ಮಧ್ಯಂತರ ವ್ಯವಸ್ಥೆಯಾಗಿದೆ. ರಾಷ್ಟ್ರಪತಿಗಳು ರದ್ದು ಪಡಿಸಿದ ಆದೇಶ ಸರಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

 

2019ರ ಆಗಸ್ಟ್‌ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು.

ಆಗಸ್ಟ್‌ನಲ್ಲಿ ಆರಂಭವಾದ 16 ದಿನಗಳ ಮ್ಯಾರಥಾನ್ ವಿಚಾರಣೆಯ ಬಳಿಕ ಪೀಠವು ಸೆಪ್ಟೆಂಬರ್ 5 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಆರ್ಟಿಕಲ್ 370, ಆರ್ಟಿಕಲ್ 35A ಭಾರತದ ಸಂವಿಧಾನದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು.  ಇದು ಪ್ರತ್ಯೇಕ ಸಂವಿಧಾನ ಮತ್ತು ಇತರ ಕಾನೂನು ವ್ಯತ್ಯಾಸಗಳ ನಡುವೆ ಪ್ರತ್ಯೇಕ ದಂಡ ಸಂಹಿತೆಯನ್ನು ಹೊಂದಲು ಅನುವು ಮಾಡಿಕೊಡುತ್ತದೆ. ಇದನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದು ಕಾನೂನು ಉಲ್ಲಂಘನೆ ಎಂದು ಅರ್ಜಿದಾರರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ನಾಯಕರು ಸೇರಿದ್ದಾರೆ. ವಿಚಾರಣೆಯ ವೇಳೆ, ಕೇಂದ್ರವು ತನ್ನ ಲಾಭಕ್ಕಾಗಿ ಎಲ್ಲವನ್ನೂ ಮಾಡುತ್ತಿದೆ ಮತ್ತು ನೆಲದ ನಿಯಮಕ್ಕೆ ಬದ್ಧವಾಗಿಲ್ಲ ಎಂದು ಅರ್ಜಿದಾರರು ಆರೋಪಿಸಿದರು.

ಸುಪ್ರೀಂಕೋರ್ಟ್ ಆದೇಶದ ಹಿನ್ನಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ.

TAGGED:indiajammu kashmirSupreme Courtಕೇಂದ್ರ ಸರ್ಕಾರಜಮ್ಮು ಕಾಶ್ಮೀರಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
10 minutes ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
10 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
38 minutes ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
1 hour ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
1 hour ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?