ಹುಬ್ಬಳ್ಳಿ: ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳಿಗೆ ಮೀಸಲಾತಿ (Reservation) ಹೆಚ್ಚಳಕ್ಕೆ ಅಧ್ಯಾದೇಶ ಹೊರಡಿಸಲು ರಾಜ್ಯಪಾಲರು ಅಂಕಿತ ಹಾಕಿದ್ದು, ಈ ಸುಗ್ರೀವಾಜ್ಞೆಗೆ ಮುಂದಿನ ಅಧಿವೇಶನದಲ್ಲಿ ಎರಡೂ ಸದನಗಳಿಂದ ಅನುಮೋದನೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಗಗಳಿಗೆ ಕಾನೂನಿನ ರಕ್ಷಣೆ ನೀಡಲಾಗುತ್ತಿದೆ. ಹಿಂದುಳಿದ ವರ್ಗಗಳ ಮೀಸಲಾತಿ (Reservation) ಬಗ್ಗೆ ಆಯೋಗಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಅಂಕಿತ – SC, ST ಸಮುದಾಯಗಳಿಗೆ ಸರ್ಕಾರದಿಂದ ದೀಪಾವಳಿ ಗಿಫ್ಟ್
ಯಾವುದೇ ವರ್ಗದ ಮೀಸಲಾತಿ ತೆಗೆಯುವುದಾಗಲಿ, ಸೇರ್ಪಡೆ ಮಾಡುವುದರ ಬಗ್ಗೆಯಾಗಲೀ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಏನೇ ಮಾಡಿದರೂ ಸಂವಿಧಾನ ಹಾಗೂ ಕಾನೂನಿನ ಚೌಕಟ್ಟಿನಲ್ಲಿಯೇ ಮಾಡಬೇಕು. ಮೀಸಲಾತಿ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು, ಸರ್ಕಾರದ ಮುಖ್ಯಸ್ಥನಾಗಿ ಸಂವಿಧಾನ (Constitution Of India) ಮತ್ತು ಕಾನೂನಿನ (Law) ಚೌಕಟ್ಟಿನಲ್ಲಿ ಮುಂದುವರಿಯಬೇಕು ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: PFI ಬ್ಯಾನ್ ಎಂದಾಗ ಸ್ವಾಗತಿಸೋರು ರಾಮಸೇನೆಯವ್ರಿಗೆ ಚಿಕ್ಕಪ್ಪನ ಮಕ್ಕಳಾ?: ಸಿಎಂ ಇಬ್ರಾಹಿಂ
ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಕ್ರಮವಾಗಿ 2% ಮತ್ತು 4% ಮೀಸಲಾತಿ ಹೆಚ್ಚಿಸಿದೆ. ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಭಾನುವಾರ ಅಂಕಿತ ಹಾಕಿದ್ದಾರೆ.