ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣದಲ್ಲಿ ನಕಲಿ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ (Krishna Naik) ಅವರನ್ನು ಬಂಧಿಸಲಾಗಿದೆ.
ಆರೋಪಿ ಕೃಷ್ಣ ನಾಯ್ಕ್ ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪ್ರೇಯಸಿ ತಾಯಿಗಾಗಿ ಚೈನ್ ಕಳ್ಳತನ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್
ಕ್ರಿಶ್ ಆರ್ಟ್ ವರ್ಲ್ಡ್‌ನ ಕೃಷ್ಣ ನಾಯ್ಕ್‌ಗೆ ಮೂರ್ತಿ ನಿರ್ಮಾಣದ ಹೊಣೆ ಹೊರಿಸಲಾಗಿತ್ತು. ನಕಲಿ ಮೂರ್ತಿ ನಿರ್ಮಾಣ ಆರೋಪದಲ್ಲಿ ನಲ್ಲೂರಿನ ಕೃಷ್ಣ ಶೆಟ್ಟಿ ದೂರಿನ ಅನ್ವಯ ಆರೋಪಿಯನ್ನು ವಶಕ್ಕೆ ಪಡೆಯಲಾಗಿತ್ತು.
ಜಾಮೀನಿಗಾಗಿ ಕೋರ್ಟ್‌ಗೆ ಶಿಲ್ಪಿ ಕೃಷ್ಣ ನಾಯ್ಕ್ ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.