ಬೆಳಗಾವಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದ ಡಿಸಿ ಕಚೇರಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು, ವಾರಾಣಸಿಯ ಜ್ಞಾನವಾಪಿ ಮಸೀದಿ ಐತಿಹಾಸಿಕ ಮಸೀದಿಗಳಲ್ಲಿ ಒಂದಾಗಿದೆ. ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದ್ದು ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ. ಅದೊಂದು ಕಾರಂಜಿ. ಅದೇ ಕಾರಂಜಿಯನ್ನೇ ಶಿವಲಿಂಗ ಎಂದು ಬಿಂಬಿಸುವ ಹುನ್ನಾರವನ್ನು ಬಿಜೆಪಿ ಮತ್ತು ಸಂಘ ಪರಿವಾರದವರು ಮಾಡುತ್ತಿದ್ದಾರೆ ಎಂದು ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ
Advertisement
Advertisement
ಇದಲ್ಲದೇ ಸರ್ಕಾರಿ ಅಧಿಕಾರಿಗಳಿಂದ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ರವಾನೆ ಮಾಡಲಾಗುತ್ತಿದೆ. 1991ರ ಆರಾಧನಾ ಕಾಯ್ದೆ ಪ್ರಕಾರ ಧಾರ್ಮಿಕ ಸ್ಥಳಗಳನ್ನು ಯಥಾಸ್ಥಿತಿಗೆ ಬಿಡಬೇಕು. ದೇಗುಲ, ಮಸೀದಿ, ಚರ್ಚ್‍ಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಆದ್ರೆ, ಕೋಮುವಾದಿ ಸಂಘಟನೆಗಳಿಂದ ದೇಶದಲ್ಲಿ ಸಾಮರಸ್ಯ ಕದಡುವ ಕೃತ್ಯ ನಡೆದಿದೆ. ಮುಸ್ಲಿಂ ಸಮುದಾಯದ ಪವಿತ್ರ ಸ್ಥಳಗಳನ್ನು ಧ್ವಂಸಗೊಳಿಸುವ ಹುನ್ನಾರ ನಡೆದಿದ್ದು ನಮಗೆ ನ್ಯಾಯ ಸಿಗುವವರೆಗೆ ಹೋರಾಟ ನಡೆಸುವುದಾಗಿ ಎಸ್‍ಡಿಪಿಐ ಪಕ್ಷದ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗಮನಿಸಿ, ಮುಂದಿನ 5 ದಿನಗಳ ಕಾಲ ಬೆಂಗ್ಳೂರಲ್ಲಿ ಭಾರೀ ಮಳೆ
Advertisement