ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆ ನಡೆಸುವ ಏಕೈಕ ಉದ್ದೇಶದೊಂದಿಗೆ ಸಂಘ ಪರಿವಾರದ ಕಿಡಿಗೇಡಿಯೊಬ್ಬ ಕೋಮುಪ್ರಚೋದನಕಾರಿ ಪೋಸ್ಟನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟು, ಇನ್ನೊಂದು ಸಮುದಾಯ ಕೆರಳುವಂತೆ ಮಾಡಿದ ಪೈಶಾಚಿಕ ಕೃತ್ಯವನ್ನು ಖಂಡಿಸುತ್ತೇವೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹೇಳಿದೆ.
Advertisement
ಬಿಜೆಪಿ ಸರ್ಕಾರದ ಸಾಲು ಸಾಲು ಭ್ರಷ್ಟಾಚಾರದ ವಿಚಾರವನ್ನು ಮತ್ತು 40% ಲಂಚಕ್ಕೆ ಸಂತೋಷ್ ಪಾಟೀಲ್ ಬಲಿ ಪಡೆದು ರಾಜೀನಾಮೆ ನೀಡಿರುವ ಈಶ್ವರಪ್ಪನವರ ಬಂಧನದ ಬೇಡಿಕೆ ವಿಚಾರವನ್ನು ವಿಷಯಾಂತರ ಮಾಡಲು ಈ ಗಲಭೆ ಸೃಷ್ಟಿಸಿರುವ ಸಾಧ್ಯತೆ ಇದೆ. ಹಾಗಾಗಿ ಈ ಇಡೀ ಘಟನೆಯನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಾಂಗ ತನಿಖೆಗೆ ಎಸ್‍ಡಿಪಿಐ ಒತ್ತಾಯಿಸುತ್ತಿದೆ. ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಪತ್ರಿಕಾ ಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್
Advertisement
Advertisement
ಪ್ರಚೋದನಾಕಾರಿ ಪೋಸ್ಟನ್ನು ಹರಿಬಿಟ್ಟ ಕಿಡಿಗೇಡಿಯನ್ನು ಮತ್ತು ಆ ಕೃತ್ಯವನ್ನು ಮಾಡಲು ಪ್ರಚೋದಿಸಿದ ಕಾಣದ ಕೈಗಳಿಗೆ ಕಾನೂನಿನ ಬೇಡಿಯನ್ನು ಹಾಕುವಂತೆ ಒತ್ತಾಯಿಸಿ ಅಲ್ಲಿನ ಸ್ಥಳೀಯರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಎದುರು ನಡೆಸಿದ ಶಾಂತಿಯುತ ಪ್ರತಿಭಟನೆಯ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲುಗಳನ್ನು ಎಸೆದಿದ್ದು ಪ್ರತಿಭಟನೆಯ ದಿಕ್ಕು ತಪ್ಪಿಸಲಾಗಿದೆ ಎಂದರು. ಇದನ್ನೂ ಓದಿ: ಹೊಸ ಆತಂಕ ಹುಟ್ಟಿಸಿದ ಓಮಿಕ್ರಾನ್ BA.2.12 ತಳಿ
Advertisement
ಶಾಂತ ರೀತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಮದ್ಯದಲ್ಲಿ ಕೆಲವು ಅಪರಿಚಿತರು ನುಸುಳಿ ಕಲ್ಲು ತೂರಾಟ ನಡೆಸಿ ಈ ಘಟನೆಯನ್ನು ನೆಪವಾಗಿಟ್ಟುಕೊಂಡು ಕೆಲ ಮಾಧ್ಯಮಗಳಲ್ಲಿ ಪ್ರತಿಭಟನಕಾರರನ್ನು ವಿಲನ್‍ಗಳಾಗಿ ಬಿಂಬಿಸುತ್ತಿರುವುದು ಅತ್ಯಂತ ಖೇದಕರ ಎಂದು ಅವರು ಅಭಿಪ್ರಾಯಪಟ್ಟರು.
ಪೊಲೀಸ್ ಇಲಾಖೆ ಘಟನೆಗೆ ಕಾರಣಕರ್ತರಾದ ನೈಜ ಕಿಡಿಗೇಡಿಗಳನ್ನು ಬಂಧಿಸದೆ ಮುಸ್ಲಿಂ ಸಮುದಾಯದ ಅಮಾಯಕ ಯುವಕರನ್ನು ಬಂಧಿಸುತ್ತಿರುವುದು ಗಮನಿಸಿದರೆ, ಇದು ಎಂದಿನಂತೆ ಪೊಲೀಸ್ ಇಲಾಖೆಯ ಪೂರ್ವಗ್ರಹ ಪೀಡಿತ ಕ್ರಮದ ಮುಂದುವರಿದ ಭಾಗವಾಗಿದೆ. ಘಟನೆಯ ನೆಪವೊಡ್ಡಿಕೊಂಡು ರಾತ್ರಿ ಹೊತ್ತು ಅಮಾಯಕರ ಮನೆಗಳಿಗೆ ಪೊಲೀಸರು ನುಗ್ಗಿ ವೃದ್ಧರು, ಮಹಿಳೆಯರು, ಮಕ್ಕಳಿಗೆ ಅನಗತ್ಯ ತೊಂದರೆ ನೀಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಸಮಾಜದಲ್ಲಿ ಸ್ವಾಸ್ಥ್ಯ ಕದಡುತ್ತಿರುವ ಮತ್ತು ಅದಕ್ಕೆ ಪ್ರೇರಣೆ ನೀಡುತ್ತಿರುವ ನೈಜ ಕಿಡಿಗೇಡಿಗಳನ್ನು ಹುಡುಕಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಿದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಆದ್ದರಿಂದ ಈ ನಿಟ್ಟಿನಲ್ಲಿ ಹುಬ್ಬಳ್ಳಿ ಜನತೆ ಶಾಂತಿ ಸೌಹಾರ್ದತೆ ಕಾಪಾಡಲು ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಎಂದು ಎಸ್‍ಡಿಪಿಐ ವಿನಂತಿಸುತ್ತದೆ. ಅದೇ ರೀತಿ ಪೊಲೀಸ್ ಅಧಿಕಾರಿಗಳು ಯಾವುದೇ ಬಾಹ್ಯ ಒತ್ತಡಗಳಿಗೆ ಒಳಗಾಗದೆ ನಿಸ್ಪಕ್ಷವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಬ್ದುಲ್ ಹನ್ನಾನ್ ವಿನಂತಿಸಿದ್ದಾರೆ.