ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ಶಾಫಿ ಬೆಳ್ಳಾರೆಗೆ (Shafi Bellare) ಎಸ್‌ಡಿಪಿಐ (SDPI) ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಿದೆ.
ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಫಿ ಬೆಳ್ಳಾರೆಯನ್ನು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಪುತ್ತೂರಿನಲ್ಲಿ ನಡೆದ ಎಸ್‌ಡಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಈ ಘೋಷಣೆಯನ್ನು ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅಬ್ದುಲ್ ಮಜೀದ್, ಶಾಫಿ ಬೆಳ್ಳಾರೆಗೆ ಟಿಕೆಟ್ ಕೊಡಿ ಎಂದು ನಮ್ಮ ಕಾರ್ಯಕರ್ತರು ಹೇಳಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿ ಶಾಫಿ ಹೆಸರನ್ನು ಸೇರಿಸಲಾಗಿದೆ. ಶಾಫಿ ರಾಜಕೀಯವಾಗಿ ಬೆಳೆಯುತ್ತಾರೆ ಎಂಬ ಕಾರಣಕ್ಕೆ ಅವರ ಮೇಲೆ ಕೊಲೆ ಆರೋಪ ಮಾಡಲಾಗಿದೆ. ಶಾಫಿ ಬಂಧನದ ಹಿಂದೆ ರಾಜಕೀಯ ದುರುದ್ದೇಶವಿದೆ. ಈ ಪ್ರಕರಣದಲ್ಲಿ ಶಾಫಿ ಕೇವಲ ಆರೋಪಿ, ಅವರ ಪರವಾಗಿ ನಿಲ್ಲುವ ಸಲುವಾಗಿ ಟಿಕೆಟ್ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂಡಿಗೆರೆ ಬಿಜೆಪಿ ಶಾಸಕ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶಾಫಿ ಆರೋಪಿಯಾಗಿದ್ದು ಎನ್‌ಐಎ ಬಂಧನದಲ್ಲಿದ್ದಾನೆ. ಎನ್‌ಐಎ ಸಾಕ್ಷ್ಯಾಧಾರಗಳನ್ನು ಮುಂದಿಟ್ಟುಕೊಂಡು ಶಾಫಿಯನ್ನು ಬಂಧಿಸಿತ್ತು. ಇದೀಗ ಶಾಫಿ ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾನೆ. ಇದನ್ನೂ ಓದಿ: LTTE ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತ: ಇಂದಿರಾ ಆಪ್ತ, ತಮಿಳು ನಾಯಕ ಸ್ಫೋಟಕ ಹೇಳಿಕೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k