ಮಂಡ್ಯ: ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಜನರು ಮತ್ತಷ್ಟು ಆತಂಕಗೊಂಡಿದ್ದಾರೆ. ಇದೀಗ ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಇದರಿಂದ ರಾತ್ರೋರಾತ್ರಿ ಪೇಟೆ ಬೀದಿ ಸೀಲ್‍ಡೌನ್ ಆಗಿದೆ.
ಪೊಲೀಸ್ ಸಿಬ್ಬಂದಿಯೇ ಮಂಡ್ಯದ ಪ್ರಮುಖ ವಾಣಿಜ್ಯ ಕೇಂದ್ರವಾದ ಪೇಟೆಬೀದಿಯನ್ನು ಸೀಲ್‍ಡೌನ್ ಮಾಡಿದ್ದಾರೆ. ಜುಬಿಲಿಯಂಟ್ ಕಾರ್ಖಾನೆ ನೌಕರೊಬ್ಬನಿಗೆ ಸೋಂಕು ಧೃಡಪಟ್ಟ ಮಾಹಿತಿ ಹಿನ್ನೆಲೆಯಲ್ಲಿ ಪೇಟೆ ಬೀದಿಯನ್ನು ಸೀಲ್‍ಡೌನ್ ಮಾಡಲಾಗಿದೆ.
Advertisement
ಈಗಾಗಲೇ ವ್ಯಾಪಾರಸ್ಥರಿಗೆ ಸರಕು ಸರಂಜಾಮು ಸಾಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೇ ಪೇಟೆ ಬೀದಿ ರಸ್ತೆಗಳನ್ನು ಬ್ಲಾಕ್ ಮಾಡಿ ಜನರು ಓಡಾಡದಂತೆ ತಡೆಯಲಾಗಿದೆ. ಜೊತೆಗೆ ಜನರು ರಸ್ತೆಗಿಳಿಯದಂತೆ, ಅಂಗಡಿ ಮುಂಗಟ್ಟುಗಳು ತೆರೆಯದಂತೆ ಪೊಲೀಸರು ಕೂಡ ಸೂಚನೆ ಕೊಟ್ಟಿದ್ದಾರೆ.
Advertisement
Advertisement
ಮಂಡ್ಯ ಜಿಲ್ಲೆಯ ಮಳವಳ್ಳಿಯ 60 ವರ್ಷದ ಪುರುಷನಿಗೆ ಶುಕ್ರವಾರ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಇವರು ರೋಗಿ ನಂಬರ್ 179ರ ಜೊತೆ ಸಂಪರ್ಕದಲ್ಲಿದ್ದರು. ಸದ್ಯಕ್ಕೆ ಇವರನ್ನು ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
ಶುಕ್ರವಾರ ಒಂದೇ ದಿನ 29 ಮಂದಿಗೆ ಕೊರೊನಾ ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೇರಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ.