ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ (Ayodhya Ram Mandir) ನಡೆಯುವ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ನಿರಾಕರಿಸಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ (Giriraj Singh) ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಜನರು ಅವಕಾಶವಾದಿ ಹಿಂದೂಗಳಾಗಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಮತ ಪಡೆಯಲು ಮೃದು ಹಿಂದೂಗಳಾಗಲು ಪ್ರಯತ್ನಿಸುತ್ತಾರೆ. ಜವಾಹರಲಾಲ್ ನೆಹರೂ ನಂತರ ಕಾಂಗ್ರೆಸ್ಸಿನ ಯಾರೊಬ್ಬರೂ ಅಯೋಧ್ಯೆಗೆ ಹೋಗಿಲ್ಲ ಎಂದು ಕಿಡಿಕಾರಿದರು.
Advertisement
#WATCH Patna: On Congress declining the invitation to attend 'pran pratishtha' ceremony of Ram Temple in Ayodhya, Union Minister Giriraj Singh says, "These people are seasonal Hindus, when they feel they have to get votes, they try to become soft Hindus. No one in the Congress… pic.twitter.com/GgZmpeUb90
— ANI (@ANI) January 11, 2024
Advertisement
ನ್ಯಾಯಾಲಯದಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸುವ ಕೆಲಸವನ್ನು ಸ್ವತಃ ಕಾಂಗ್ರೆಸ್ (Congress) ಪಕ್ಷವೇ ಮಾಡಿದೆ. ಆದರೆ ಅವರಿಗೆ ಅಯೋಧ್ಯೆಗೆ ಹೋಗಲು ನೈತಿಕ ಶಕ್ತಿ ಇಲ್ಲ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಹೋಗಲ್ಲ: ಕಾಂಗ್ರೆಸ್
Advertisement
Advertisement
ನಿನ್ನೆಯಷ್ಟೇ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್, ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸೋನಿಯಾ ಗಾಂಧಿ (Sonia Gandhi) ಮತ್ತು ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ಬಂದಿತ್ತು. ಆದರೆ ಗೌರವ ಪೂರ್ವಕವಾಗಿ ಕಾಂಗ್ರೆಸ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧರಿಸಿದೆ ಎಂದು ತಿಳಿಸಿದೆ.
ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ವಿಷಯವಾಗಿದ್ದು, ಆರ್‍ಎಸ್‍ಎಸ್ ಮತ್ತು ಬಿಜೆಪಿ (BJP) ಅಯೋಧ್ಯೆಯಲ್ಲಿ ಮಂದಿರವನ್ನು ರಾಜಕೀಯಕ್ಕಾಗಿ ಹಿಂದಿನಿಂದಲೂ ಬಳಕೆ ಮಾಡುತ್ತಿದೆ. ಬಿಜೆಪಿ ಮತ್ತು ಆರ್‍ಎಸ್‍ಎಸ್ (RSS) ನಾಯಕರಿಂದ ಅಪೂರ್ಣ ದೇವಾಲಯದ ಉದ್ಘಾಟನೆ ಚುನಾವಣಾ ಲಾಭಕ್ಕಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ಹೆಳಿಕೊಂಡಿತ್ತು.