* ಎಂಟು ಮಂದಿ ಶಂಕಿತ ಆರೋಪಿಗಳು ಪೊಲೀಸ್ ವಶಕ್ಕೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಮತ್ತೆ ಸೀಟ್ ಬ್ಲಾಕ್ ದಂಧೆಯ ಕಳಂಕ ತಟ್ಟಿದೆ. ಸೀಟ್ ಬ್ಲಾಕಿಂಗ್ ಕುರಿತು ಕೆಇಎ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬೆನ್ನಲ್ಲೇ ಕಾರ್ಯಚರಣೆ ನಡೆಸಿದ ಪೊಲೀಸರು, ಕೆಇಎ ಸಿಬ್ಬಂದಿ ಸೇರಿ ಎಂಟು ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟ್ ಬ್ಲ್ಯಾಕ್ ಮಾಡುವ ದಂಧೆಯಲ್ಲಿ ಇವರು ಪಾಲ್ಗೊಂಡಿದ್ದ ಅನುಮಾನವಿದೆ. ಎಲ್ಲಾ ಗೊತ್ತಿದ್ದರೂ ಉನ್ನತ ಶಿಕ್ಷಣ ಇಲಾಖೆ ಸುಮ್ಮನೆ ಇದೆಯಾ ಎಂಬ ಪ್ರಶ್ನೆ ಎದ್ದಿದೆ.