ಬೆಂಗಳೂರು: ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕ್ (Seat Block) ಮಾಡುವ ದಂಧೆಯಲ್ಲಿ ತೊಡಗಿದ್ದ 10 ಆರೋಪಿಗಳನ್ನು ಮಲ್ಲೇಶ್ವರಂ (Malleshwaram) ಪೊಲೀಸರು ಬಂಧಿಸಿದ್ದಾರೆ.
ಒಟ್ಟು 10 ಜನರನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳ ಪೈಕಿ ಕೆಲವರನ್ನು ಹರ್ಷ, ಪ್ರಕಾಶ್, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್, ಅವಿನಾಶ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಡಿ.22 ರಂದು ಹಸೆಮಣೆ ಏರಲಿದ್ದಾರೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು
Advertisement
Advertisement
ಈ ಗ್ಯಾಂಗ್ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕ್ ದಂಧೆ ಮಾಡುತ್ತಿದ್ದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕೌನ್ಸಲಿಂಗ್‌ಗೆ ಹಾಜರಾಗಿ ಕಾಲೇಜು ಆಯ್ಕೆಯಾಗದೇ ಇರುವವರನ್ನು ಗುರಿಯಾಗಿಸಿಕೊಂಡಿದ್ದರು. ಈ ರೀತಿ ನಾನಾ ಕಾರಣಗಳಿಂದ 2,625 ವಿದ್ಯಾರ್ಥಿಗಳು ಸೀಟ್ ರಿಜೆಕ್ಟ್ ಮಾಡಿದ್ದರು.
Advertisement
ಕೆಇಎ (KEA) ನೌಕರ ಅವಿನಾಶ್‌ನ ಸಹಾಯದಿಂದ ಪಡೆದ ಪಾಸ್‌ವರ್ಡ್‌ನಿಂದ ಸರ್ಕಾರಿ ಸೀಟ್ ಪಡೆದು ಕಾಲೇಜು ಆಯ್ಕೆ ಮಾಡಿಕೊಳ್ಳದ ವಿದ್ಯಾರ್ಥಿಗಳ ಸೀಟ್ ಬ್ಲಾಕ್ ಮಾಡುತ್ತಿದ್ದರು. ಆ ಸೀಟ್‌ಗಳನ್ನು ಲಕ್ಷಾಂತರ ರೂ.ಗೆ ಮ್ಯಾನೇಜ್‌ಮೆಂಟ್ ಕೋಟಾದಡಿ ಬೇರೆಯವರಿಗೆ ಡೀಲ್ ಮಾಡುತ್ತಿದ್ದರು. ಕಾಲೇಜಿನ ಮ್ಯಾನೇಜ್‌ಮೆಂಟ್ ಹಾಗೂ ಮಧ್ಯವರ್ತಿಗಳ ಸಹಾಯದಿಂದ ಡೀಲ್ ಮಾಡುವುದರಲ್ಲಿ ತೊಡಗಿದ್ದರು.
Advertisement
ಆರೋಪಿ ಪ್ರಕಾಶ್ ದೂರು ದಾಖಲಾಗಿದೆ ಎಂದು ಗೊತ್ತಾದ ಕೂಡಲೇ ತಮ್ಮ ಬಳಿಯಿದ್ದ ಲ್ಯಾಪ್‌ಟಾಪ್‌ಗಳನ್ನು ಕಡೂರಿನ ತನ್ನ ಜಮೀನಿನಲ್ಲಿ ಸುಟ್ಟುಹಾಕಿ ಸಾಕ್ಷಿ ನಾಶ ಮಾಡಿದ್ದ. ಸದ್ಯ ಮಲ್ಲೇಶ್ವರಂ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.ಇದನ್ನೂ ಓದಿ: ಹುಟ್ಟೂರಿಗೆ ಶೋಭಿತಾ ಮೃತದೇಹ – ಇಂದು ಅಂತ್ಯಕ್ರಿಯೆ