ಚಿಕ್ಕಮಗಳೂರು: ಇಂದು ನಮಗೆ ಎರಡನೇ ದೀಪಾವಳಿ. ಭಾರತೀಯರ ಸಿಂಧೂರಕ್ಕೆ ಕೈ ಹಾಕಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ ಎಂದು ಮಾಜಿ ಸಚಿವ ಸಿ.ಟಿ ರವಿ (CT Ravi) ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ (Pahalgam Terror Attack) ಭಾರತೀಯ ಸೇನೆ ಪ್ರತೀಕಾರ ತೆಗೆದುಕೊಂಡ ಕುರಿತು ಚಿಕ್ಕಮಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಕೊಟ್ಟ ಮಾತು ತಪ್ಪೋದಿಲ್ಲ ಎಂಬ ನಂಬಿಕೆ ಇತ್ತು. ಭಾರತೀಯ ಸೇನೆ ಮೇಲೂ ಅಪಾರವಾದ ನಂಬಿಕೆ ಇತ್ತು. 71ರಲ್ಲಿ ಯುದ್ಧ ಗೆದ್ವಿ, ಆದರೆ ಸಂಧಾನದಲ್ಲಿ ಸೋತಿದ್ದೆವು. ಭಾರತಮಾತೆ, ಸಹೋದರಿ ಸಿಂಧೂರ ಅಳಿಸಲು ಬಂದವರನ್ನು ಅಳಿಸಿದ್ದೇವೆ ಎಂದರು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 15ಕ್ಕೂ ಹೆಚ್ಚು ನಕ್ಸಲರನ್ನು ಬಲಿ ಪಡೆದ ಭದ್ರತಾ ಪಡೆ
ಸಿಂಧೂರ ಎಂಬ ಹೆಸರಿಗೆ ಮೋದಿ, ಸೇನೆ ಬೆಲೆ ತಂದುಕೊಟ್ಟಿದ್ದಾರೆ. ಶತ್ರುಗಳನ್ನು ಪೂರ್ಣ ನಿರ್ಣಾಮ ಮಾಡಿ, ನಿಮ್ಮ ಜೊತೆ ನಾವಿದ್ದೇವೆ. ಒಂದು ಸಲ ಅವರನ್ನು ಸಂಪೂರ್ಣವಾಗಿ ಮುಗಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ನಾವು ಮೋದಿಗೆ ಹೇಳಿದ್ವಿ ಇಂದು ಉತ್ತರ ಸಿಕ್ತು, ಅವ್ರು ಯಾರಿಗೆ ಹೇಳ್ತಾರೆ: ಮಂಜುನಾಥ್ ಸಂಬಂಧಿ
ರಾಜ್ಯ ಕಾಂಗ್ರೆಸ್ ಟ್ವೀಟ್ ಡಿಲೀಟ್ ಕುರಿತು ಪ್ರತಿಕ್ರಿಯಿಸಿದ ಅವರು, ನಾಗರಿಕರ ನಡುವೆ ಶಾಂತಿ ಇರಬೇಕು. ಶತ್ರುಗಳನ್ನು ಮಟ್ಟ ಹಾಕುವುದು ಶಾಂತಿಯೇ, ಶ್ವಾಶತ ಶಾಂತಿಗೆ ಕಾರಣವಾಗುತ್ತದೆ. ರಾಜ್ಯ ಕಾಂಗ್ರೆಸ್ಸಿಗೆ ನಾನು ಕೂಡ ಟ್ವೀಟ್ ಮಾಡಿದ್ದೆ. ರಾಜ್ಯ ಕಾಂಗ್ರೆಸ್ ಟ್ವೀಟ್ ಡಿಲೀಟ್ ಮಾಡಿರುವುದನ್ನು ನೋಡಿದ್ದೇನೆ. ಇದು ಬದಲಾಗಿರುವ ಕಾಂಗ್ರೆಸ್ ಮನಸ್ಥಿತಿ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಯೋಗ್ಯತೆಯನ್ನು ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್ ಮೇಲೆ ಜನರಿಗೆ ಅಪನಂಬಿಕೆ, ಜಿಗುಪ್ಸೆಯನ್ನು ಮೂಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಾಕ್ ಉಗ್ರರ ದಾಳಿಗೆ SCALP, HAMMER ಕ್ಷಿಪಣಿಯನ್ನೇ ಬಳಸಿದ್ದು ಯಾಕೆ?