ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ ಸೆ.1ರಿಂದ ದ್ವಿತೀಯ ಪಿಯುಸಿ ಭೌತಿಕ ತರಗತಿ ಆರಂಭಿಸಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅದೇಶಿಸಿದ್ದಾರೆ.
Advertisement
ಎಸ್.ಒ.ಪಿ ಅನುಷ್ಠಾನ ಜಾರಿಗೊಳಿಸುವ ಜವಾಬ್ದಾರಿಯನ್ನು ಕಾಲೇಜಿನ ಪ್ರಾಂಶುಪಾಲರು ವಹಿಸುವಂತೆ ಸೂಚನೆ ನೀಡಲಾಗಿದ್ದು, ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಏಳು ದಿನ ಕ್ವಾರಂಟೈನ್ ಕಡ್ಡಾಯ ಮಾಡಲು ಜಿಲ್ಲಾಡಳಿತ ಆದೇಶಿಸಿದೆ. ಕೇರಳದಿಂದ ಪ್ರತಿದಿನ ಬರುವ ವಿದ್ಯಾರ್ಥಿಗಳಿಗೆ 7 ದಿನಕ್ಕೊಮ್ಮೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ ತರಬೇಕಾಗುತ್ತದೆ. ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಸೇರಲು ಮಂಗಳೂರಿಗರ ಹಿಂದೇಟು – ಹೊಸ ಆಫರ್ ನೀಡಿದ್ರು ಎನ್. ಶಶಿಕುಮಾರ್
Advertisement
Advertisement
ವಸತಿ ನಿಲಯ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿ ನಡೆಸಬೇಕು. ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲೇ ವಸತಿ ಸಹಿತ ಪ್ರತ್ಯೇಕ ಕೊರೊನಾ ಕೇರ್ ಸೆಂಟರ್ ಮಾಡಬೇಕು. ಸಿಬ್ಬಂದಿಗಳಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಬೇಕು. ಜೊತೆಗೆ ಕೊರೊನಾ ಎಸ್.ಒ.ಪಿ ಪಾಲನೆಯ ಪರಿಶೀಲನೆಗೆ ಪ್ರತ್ಯೇಕ ತಂಡ ರಚನೆ ಮಾಡಬೇಕೆಂದು ಆದೇಶಿಸಲಾಗಿದೆ. ಇದನ್ನೂ ಓದಿ: ಮೈಸೂರು ಪ್ರಕರಣದ ಬಳಿಕ ಮಂಗಳೂರು ಪೊಲೀಸರು ಹೈ ಅಲರ್ಟ್- ಸುರಕ್ಷತೆಗೆ ಮಾಸ್ಟರ್ ಪ್ಲಾನ್