ಬೆಂಗಳೂರು: ದ್ವಿತೀಯ ಪಿಯುಸಿ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.
ಏಪ್ರಿಲ್ 16 ರಿಂದ ಮೇ 4 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಪಿಯು ಬೋರ್ಡ್ ನಿಂದ ವೇಳಾಪಟ್ಟಿ ಪ್ರಕಟವಾಗಿದ್ದು, ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 1 ವರೆಗೆ ಅವಕಾಶ ನೀಡಲಾಗಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಫೆಬ್ರವರಿ 17 ರಿಂದ ಮಾರ್ಚ್ 25 ವರೆಗೆ ನಡೆಸಲು ದಿನಾಂಕ ನಿಗದಿಯಾಗಿದೆ.
Advertisement
Advertisement
ದ್ವಿತೀಯ ಪಿಯುಸಿ ಪರೀಕ್ಷೆಗೆ ಶೇ.70ರಷ್ಟು ಪಠ್ಯಕ್ಕೆ ಮಾತ್ರ ಪರೀಕ್ಷೆ ನಡೆಯಲಿದೆ. ಭಾಷಾ ವಿಷಯಕ್ಕೆ ಶೇ.70ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದ್ದು, ಐಚ್ಛಿಕ ವಿಷಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಶೇ.100ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪಿಯು ಬೋರ್ಡ್ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕನ್ನಡಕ್ಕೆ ಬಂದಿದೆ ಹೊಸ ಫಾಂಟ್ ಬಂಡೀಪುರ!
Advertisement
Advertisement
ಇತ್ತ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೂ ದಿನಾಂಕ ನಿಗದಿ ಮಾಡಲಾಗಿದೆ. ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪರೀಕ್ಷೆ ನಡೆಯಲಿದೆ. ಪ್ರಥಮ ಪಿಯುಸಿ ಪರೀಕ್ಷೆಗೆ ಶೇ.70 ಪಠ್ಯಕ್ಕೆ ಮಾತ್ರ ಪರೀಕ್ಷೆ ನಡೆಯಲಿದ್ದು, ಭಾಷಾ ವಿಷಯಕ್ಕೆ ಶೇ.70ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ. ಇಲ್ಲಿಯೂ ಐಚ್ಛಿಕ ವಿಷಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಶೇ.100ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ.
ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಇಂತಿದೆ:
ಏ.16- ಗಣಿತ, ಶಿಕ್ಷಣ, ಬೇಸಿಕ್ ಗಣಿತ.
ಏ.18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಏ.19– ಹೆಲ್ತ್ ಕೇರ್, ರೀಟೇಲ್, ಇನ್ಫಾರ್ಮೇಶನ್ ಟೆಕ್ನಾಲಜಿ.
ಏ.20- ಇತಿಹಾಸ, ಭೌತಶಾಸ್ತ್ರ
ಏ.21– ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್.
ಏ.22– ಲಾಜಿಕ್, ಬ್ಯುಸಿನೆಸ್ ಸ್ಟಡೀಸ್.
ಏ.23- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ.
ಏ.25- ಅರ್ಥಶಾಸ್ತ್ರ
ಏ.26- ಹಿಂದಿ.
ಏ.28- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ.
ಏ.29- ಕನ್ನಡ.
ಏ.30– ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ.2-ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ.4- ಇಂಗ್ಲಿಷ್