ಹುಬ್ಬಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ (Second PUC Exam) ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ (North Western Karnataka Road Transport Corporation) ಸಂಸ್ಥೆ ತಿಳಿಸಿದೆ.
Advertisement
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಶಾಲೆಗಳಲ್ಲಿ ಪರೀಕ್ಷೆಗಳು ನಡೆಯುವುದರಿಂದ ಶಿಕ್ಷಣ ಇಲಾಖೆಯ (Education Department) ಕೋರಿಕೆಯ ಮೇರೆಗೆ ಈ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: Breaking- ‘ಕಬ್ಜ’ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ಬಿಗ್ ಬಿ ಅಮಿತಾಬ್ ಬಚ್ಚನ್
Advertisement
Advertisement
ಮಾರ್ಚ್ 9ರಿಂದ 29ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ತೆರಳುವ ವಿದ್ಯಾರ್ಥಿಗಳು ನಿರ್ವಾಹಕರಿಗೆ (Conductor) ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣದ ಸೌಲಭ್ಯ ಪಡೆಯಬಹುದಾಗಿದೆ. ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಮದುವೆಯ ಬಳಿಕ ಮ್ಯಾಂಗೋ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ