ಮಡಿಕೇರಿ: ಇಂದು ರಾಜ್ಯದ ಎಲ್ಲೆಡೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಹಿಜಬ್ ಧರಿಸಿ ಶಿಕ್ಷಕಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ಬಂದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.
ನಗರ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಆರಂಭವಾಗುವ ಮುನ್ನ ಮಡಿಕೇರಿ ನಗರದ ರಾಜೇಶ್ವರಿ ಕಾಲೇಜಿನಿ ಶಿಕ್ಷಕಿ ಅನಿಷತ್ ಅವರು ಹಿಜಬ್ ಧರಿಸಿ ಪರೀಕ್ಷಾ ಕೇಂದ್ರದ ಒಳಗೆ ಆಗಮಿಸಿದ್ದರು. ಈ ವೇಳೆ ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಯಾವುದೇ ಭಯ ಬೇಡ. ಯಾವುದೇ ಆಂತಕಕ್ಕೆ ಒಳಗಾದ ರೀತಿಯಲ್ಲಿ ಪರೀಕ್ಷೆ ಬರೆಯುವಂತೆ ಧೈರ್ಯ ಹೇಳಿದರು. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲೂ ಹಿಜಬ್ ವಿದ್ಯಾರ್ಥಿನಿಯರ ಹೈಡ್ರಾಮಾ – ಮನೆಗೆ ನಡೆದ ವಿದ್ಯಾರ್ಥಿನಿಯರು
Advertisement
Advertisement
ಇದೇ ಸಂದರ್ಭ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ವಿಜಯ್ ಅವರು ಪರೀಕ್ಷಾ ಕೇಂದ್ರದ ಒಳಗೆ ಪೋಷಕರು ಹಾಗೂ ಇತರೆ ಶಿಕ್ಷಕರು ಬರದಂತೆ ತಾಕಿತು ಮಾಡಿದರು. ಇದೇ ಸಂದರ್ಭದ ಹಿಜಬ್ ಹಾಕಿಕೊಂಡು ಬಂದ ಶಿಕ್ಷಕಿಯನ್ನು ಪೊಲೀಸರು ಪರೀಕ್ಷಾ ಕೇಂದ್ರದಿಂದ ಹೊರಗೆ ಕಳುಹಿಸಿದ ಘಟನೆ ನಡೆಯಿತು. ಇದನ್ನೂ ಓದಿ: CFI, PFI ಸಂಘಟನೆಗಳೇ ಮಕ್ಕಳ ಭವಿಷ್ಯ ಹಾಳಾಗೋದಕ್ಕೆ ಕಾರಣ: ಬಿ.ಸಿ.ನಾಗೇಶ್