– ಶೇ. 81.15 ಫಲಿತಾಂಶ; ಗದಗ ಜಿಲ್ಲೆಗೆ ಕೊನೆ ಸ್ಥಾನ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.81.15 ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
Advertisement
ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ. ಇದನ್ನೂ ಓದಿ: ಲೋಕ ಸಮರ ಗೆಲ್ಲೋಕೆ ರಣತಂತ್ರ- ಹೊಸತೊಡಕು ನೆಪದಲ್ಲಿ ಹೆಚ್ಡಿಕೆ ತೋಟದ ಮನೆಯಲ್ಲಿ ಸಭೆ
Advertisement
Advertisement
ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.
Advertisement
ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ ವೆಬ್ಸೈಟ್ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.