Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಭರ್ತಿ – ವಾಣಿವಿಲಾಸ ಸಾಗರ ಡ್ಯಾಂಗೆ ಬಾಗಿನ ಅರ್ಪಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಭರ್ತಿ – ವಾಣಿವಿಲಾಸ ಸಾಗರ ಡ್ಯಾಂಗೆ ಬಾಗಿನ ಅರ್ಪಣೆ

Chitradurga

ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಭರ್ತಿ – ವಾಣಿವಿಲಾಸ ಸಾಗರ ಡ್ಯಾಂಗೆ ಬಾಗಿನ ಅರ್ಪಣೆ

Public TV
Last updated: January 4, 2026 8:18 pm
Public TV
Share
3 Min Read
Chitradurga Vani Vilas Sagar Dam Bagina
SHARE

ಚಿತ್ರದುರ್ಗ: ಒಂದೇ ವರ್ಷದಲ್ಲಿ ಸತತ ಎರಡನೇ ಬಾರಿಗೆ ಬರದನಾಡು ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲೂಕಿನ ಜೀವನಾಡಿ ಎನಿಸಿರುವ ವಾಣಿವಿಲಾಸ ಸಾಗರ ಜಲಾಶಯ (Vani Vilas Sagar Dam) ಭರ್ತಿಯಾದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ (D Sudhakar) ಭಾನುವಾರ ಬಾಗಿನ ಸಮರ್ಪಿಸಿದರು.

ವಿವಿಧ ಆಕರ್ಷಕ ಪುಷ್ಪಗಳಿಂದ ಅಲಂಕಾರಗೊಂಡಿದ್ದ ವಿ.ವಿ.ಸಾಗರ ಜಲಾಶಯದ ಅಣೆಕಟ್ಟೆ ಮೇಲಿಂದ ಸಚಿವ ಡಿ.ಸುಧಾಕರ್ ಹಾಗೂ ಶಾಸಕರಾದ ಬಿ.ಜಿ. ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಸೇರಿದಂತೆ ವಿವಿಧ ಗಣ್ಯರು ಪುಷ್ಪಾರ್ಚನೆ ಮಾಡಿ, ಹಾಲುತುಪ್ಪ ಸುರಿದಿದ್ದು, ಆಕರ್ಷಕವಾಗಿರಲೆಂದು ಬಾಗಿನಗಳಿಗೆ ಕಲರ್ ಪ್ಲಾಸ್ಟಿಕ್‌ಗಳನ್ನು ಅಧಿಕಾರಿಗಳು ಸುತ್ತಿದ್ದರು. ಆದರೆ ಬಾಗಿನ ಸಮರ್ಪಣೆ ವೇಳೆ ಅವುಗಳನ್ನು ತೆಗೆಯದೇ ಪ್ಲಾಸ್ಟಿಕ್ ಸಮೇತವಾಗಿ ಬಾಗಿನ ಅರ್ಪಿಸಿ ಗಂಗೆಗೆ ನಮನ ಸಲ್ಲಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಬೆಂಕಿಯಿಂದ ಹೊಲದಲ್ಲೇ ಸುಟ್ಟು ಭಸ್ಮವಾದ ರಾಗಿ ಹುಲ್ಲು

ಇನ್ನು ಬಾಗಿನಕ್ಕೆ ಸುತ್ತಿದ್ದ ಪ್ಲಾಸ್ಟಿಕ್ ಸಮೇತವಾಗಿ ಬಾಗಿನವನ್ನು ಡ್ಯಾಂಗೆ ಎಸೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಪರಿಸರವಾದಿಗಳು ಹಿಡಿಶಾಪ ಹಾಕಿದರು. ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕಳೆದ 2025ರ ಜನವರಿಯಲ್ಲಿ ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗಿತ್ತು. ನಂತರ ಅಕ್ಟೋಬರ್ ತಿಂಗಳಿನಲ್ಲಿಯೇ ಮತ್ತೊಮ್ಮೆ ಜಲಾಶಯ ಭರ್ತಿಯಾಗಿತ್ತು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಂದ ಜಲಾಶಯಕ್ಕೆ ಕಳೆದ ಡಿಸೆಂಬರ್ ಮಾಹೆಯಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮ ಏರ್ಪಡಿಸಲು ಪ್ರಯತ್ನ ನಡೆಸಲಾಗಿತ್ತು. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸಮಯ ಅಭಾವದ ಕಾರಣ ಇಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಬಾಗಿನ ಅರ್ಪಿಸಲಾಗಿದೆ ಎಂದರು. ಇದನ್ನೂ ಓದಿ: ಚುನಾವಣೆ ಮೇಲೆ ಸ್ಟಾಲಿನ್‌ ಕಣ್ಣು, ತಮಿಳುನಾಡು ಜನರಿಗೆ ಸಿಹಿಸುದ್ದಿ – ಪೊಂಗಲ್‌ಗೆ 3,000 ರೂ. ಗಿಫ್ಟ್‌!

ಒಂದೇ ವರ್ಷದಲ್ಲಿಯೇ ಎರಡು ಬಾರಿ ವಿ.ವಿ.ಸಾಗರ ಜಲಾಶಯ ಭರ್ತಿಯಾಗಿರುವುದು ಜಿಲ್ಲೆಯ ಜನರಿಗೆ ತುಂಬಾ ಹರ್ಷ ತಂದಿದೆ. ವಾಣಿವಿಲಾಸ ಜಲಾಶಯದ ಹಿನ್ನೀರಿನಿಂದಾಗಿ ಹೊಸದುರ್ಗ ರೈತರ ಸಮಸ್ಯೆ ಬಗೆಹರಿಸುವ ಸಂಬಂಧ ಕಳೆದ ತಿಂಗಳು ಜಿಲ್ಲೆಯ ಶಾಸಕರು ಹಾಗೂ ಉಪಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಲಾಖಾ ಅಧಿಕಾರಿಗಳು ರೂಪುರೇಷೆ ಸಿದ್ಧಪಡಿಸಿದ್ದೇವೆ. ವಿ.ವಿ.ಸಾಗರ ಜಲಾಶಯದ ಹಿನ್ನೀರಿನಿಂದಾಗಿ ರೈತರು ಅನುಭವಿಸುವ ತೊಂದರೆಗಳ ನಿವಾರಣೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ, ಕಲಾವಿದರು, ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಸಿಎಂ

ಹೊಸದುರ್ಗ ತಾಲ್ಲೂಕಿನ 920 ರೈತರಿಗೆ ಪರಿಹಾರ ವಿತರಣೆ ಮಾಡಲು ಈಗಾಗಲೇ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಕೆರೆ, ರಸ್ತೆ, ಸೇತುವೆ ರಿಪೇರಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು. ಇದನ್ನೂ ಓದಿ: 3 ಹೆಣ್ಣು ಮಕ್ಕಳು, ಹೆಂಡತಿ ಬಿಟ್ಟು ಗಂಡ ಪರಾರಿ – ಗಂಡು ಮಗು ಆಗಲಿಲ್ಲ ಅಂತ ಕೈ ಕೊಟ್ಟ ಪತಿ!

ಈ ಸಂದರ್ಭದಲ್ಲಿ ಸಚಿವರೊಂದಿಗೆ ಶಾಸಕರಾದ ಬಿ.ಜಿ.ಗೋವಿಂದಪ್ಪ, ಡಾ.ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಸಾಥ್ ನೀಡಿದರು. ಆದರೆ ಚಿತ್ರದುರ್ಗ ಶಾಸಕ ಕೆಸಿ ವೀರೇಂದ್ರ ಪಪ್ಪಿ, ಮೊಳಕಾಲ್ಮೂರು ಶಾಸಕ ಎನ್‌ವೈ ಗೋಪಾಲಕೃಷ್ಣ ಹಾಗೂ ಎಂಎಲ್‌ಸಿಗಳಾದ ನವೀನ್ ಮತ್ತು ಶ್ರೀನಿಯ ಗೈರಾಗಿದ್ದರು. ಇದನ್ನೂ ಓದಿ: ಜ.12 ರಿಂದ KRS ವ್ಯಾಪ್ತಿಯ ರೈತರಿಗೆ ಕಟ್ಟು ಪದ್ಧತಿ ನೀರು

ಬಾಗಿನ ಅರ್ಪಣೆ ವೇಳೆ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಎಫ್.ಹೆಚ್.ಲಮಾಣಿ, ಅಧೀಕ್ಷಕ ಇಂಜಿನಿಯರ್ ಹರೀಶ್ ಕೆ.ಟಿ., ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ ಬಾರಿಕರ ಸೇರಿದಂತೆ ರೈತ ಮುಖಂಡರು ಇದ್ದರು. ಇದನ್ನೂ ಓದಿ: ಸಿಎಂ ಅಪರಾಧಿಗಳ ಜೊತೆ ಕುಳಿತರೆ ನ್ಯಾಯ ಹೇಗೆ ಸಿಗುತ್ತೆ? – ಶೋಭಾ ಕರಂದ್ಲಾಜೆ

TAGGED:baginaChitradurgaD SudhakarVani Vilas Sagar Damಚಿತ್ರದುರ್ಗಡಿ ಸುಧಾಕರ್ಬಾಗಿನವಾಣಿವಿಲಾಸ ಸಾಗರ ಡ್ಯಾಂ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

King Kohli sets two records in a single match RCB vs GT chinnaswamy stadium Bengaluru
Cricket

ಒಂದೇ ಪಂದ್ಯದಲ್ಲಿ 2 ದಾಖಲೆ ಬರೆದ ಕಿಂಗ್‌ ಕೊಹ್ಲಿ

Public TV
By Public TV
23 minutes ago
paytm payments bank
Latest

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು- ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು ಯಾಕೆ?

Public TV
By Public TV
2 hours ago
Kanakapura Cauvery River Elephant attack on tourists
Districts

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮಹಿಳೆಗೆ ಗಾಯ

Public TV
By Public TV
2 hours ago
GBA
Bengaluru City

ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ: ಸುಪ್ರೀಂಗೆ GBA ಅಳಲು

Public TV
By Public TV
3 hours ago
BMTC ETM Machine
Bengaluru City

ಬಿಎಂಟಿಸಿ ಎಲ್ಲಾ ಬಸ್‌ಗಳಲ್ಲಿ ಹೊಸ ಇಟಿಎಂ – ಡೈನಾಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಮಾತ್ರ ಟಿಕೆಟ್ ಜನರೇಟ್

Public TV
By Public TV
3 hours ago
MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?