ನವದೆಹಲಿ: ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಹೂಡಿಕೆ, ಡಿಪಾಸಿಟ್ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. 2021ರಲ್ಲಿ ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 30,500 ಕೋಟಿ ರೂ.ಗೆ ಏರಿಕೆ ಕಂಡಿದೆ.
Advertisement
ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಹೂಡಿಕೆ 14 ವರ್ಷಗಳ ಗರಿಷ್ಠ ಮೊತ್ತವಾಗಿದೆ. 2020ರಲ್ಲಿ ಸ್ವಿಸ್‍ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 20,700 ಕೋಟಿ ರೂಪಾಯಿಗಳಷ್ಟಿತ್ತು. ಒಂದು ವರ್ಷದ ಅವಧಿಯಲ್ಲಿ ಅದು ಶೇಕಡಾ 50ರಷ್ಟು ಹೆಚ್ಚಿದೆ. ಸತತ ಎರಡನೇ ವರ್ಷ ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು ಹೆಚ್ಚಾಗಿದೆ. ಇದೇ ವೇಳೆ, ಸತತ ಎರಡು ವರ್ಷಗಳ ಕಾಲ ಕುಸಿತ ಕಂಡಿದ್ದ ಭಾರತೀಯ ಗ್ರಾಹಕರ ಉಳಿತಾಯ ಅಥವಾ ಠೇವಣಿ ಖಾತೆಗಳಲ್ಲಿನ ಮೊತ್ತ 2021ರಲ್ಲಿ ಏಳು ವರ್ಷದ ಗರಿಷ್ಠಕ್ಕೆ ಮೊತ್ತ ದಾಖಲಾಗಿದೆ. ಇದನ್ನೂ ಓದಿ: ‘ಅಗ್ನಿಪಥ್’ ದೇಶ ಸೇವೆ ಮಾಡಲು ಯುವಕರಿಗೆ ಸುವರ್ಣ ಅವಕಾಶ: ರಾಜನಾಥ್ ಸಿಂಗ್
Advertisement
Advertisement
ಗ್ರಾಹಕರ ಉಳಿತಾ ಅಥವಾ ಠೇವಣಿ ಖಾತೆಗಳಲ್ಲಿನ ಮೊತ್ತ 4,800 ಕೋಟಿ ರೂಪಾಯಿಯಷ್ಟಾಗಿದೆ. ಈ ಮಾಹಿತಿಯನ್ನು ಸ್ವಿಜರ್ಲ್ಯಾಂಡ್ ಸೆಂಟ್ರಲ್ ಬ್ಯಾಂಕ್ ಪ್ರಕಟಿಸಿದೆ. ಸ್ವಿಸ್ ಬ್ಯಾಂಕ್‍ನಲ್ಲಿರುವ ಹಣವನ್ನು ಕಪ್ಪುಹಣ ಎಂದು ಹೇಳಲಾಗುತ್ತದೆ. ಆದ್ರೆ, ಈ ದುಡ್ಡು ಕಪ್ಪು ಹಣವೇ ಎಂಬುದಕ್ಕೆ ಯಾವುದೇ ಆಧಾರಗಳು ಲಭಿಸಿಲ್ಲ. ಇದನ್ನೂ ಓದಿ: ಇಸ್ರೇಲ್ ಮಾದರಿಯ ʼಅಗ್ನಿಪಥ್ʼ- ಏನಿದು ಯೋಜನೆ, ಯಾಕಿಷ್ಟು ವಿರೋಧ?
Advertisement
ಅಘೋಷಿತ ವಿದೇಶಿ ಆಸ್ತಿಗಳನ್ನು ಘೋಷಿಸಲು 2015ರಲ್ಲಿ ಅಮ್ನೆಸ್ಟಿ ಯೋಜನೆ ಸೇರಿದಂತೆ ಕಪ್ಪುಹಣ ವಿರೋಧಿ ಕ್ರಮಗಳ ನಂತರ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿದೇಶದಲ್ಲಿ ಇಟ್ಟಿರುವ ಕಪ್ಪುಹಣದ ವಿರುದ್ಧ ಸಮರ ಸಾರಿತ್ತು. ಸ್ವಿಸ್ ಬ್ಯಾಂಕ್‍ಗಳಲ್ಲಿ ಇಟ್ಟಿರುವ ಕಪ್ಪು ಹಣದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮೋದಿ ಸರ್ಕಾರ ಘೋಷಿಸಿತ್ತು. ಅದರೂ ಕೂಡ ಕಪ್ಪು ಹಣದ ವ್ಯವಹಾರ ಇಂದಿಗೂ ನಿಂತಿಲ್ಲ. ಕಪ್ಪು ಹಣವನ್ನು ಬಹಿರಂಗಪಡಿಸುವುದಾಗಿ ಕೇಂದ್ರ ಸರ್ಕಾರ ನೀಡಿದ್ದ ಭರವಸೆ ಹಾಗೆ ಉಳಿದುಕೊಂಡಿದೆ.