ಮಂಡ್ಯ: ವಾರಣಾಸಿಯ ಗಂಗಾರತಿಯ (Gangarathi) ಮಾದರಿಯಲ್ಲೇ ಕರ್ನಾಟಕದಲ್ಲೂ (Karnataka) ಕಾವೇರಿ ನದಿಗೆ (Cauvery River) ಪೂಜೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾವೇರಿ ಆರತಿ (Cauvery Aarathi) ಕಾರ್ಯಕ್ರಮದ ಎರಡನೇ ವರ್ಷದ ಸಂಭ್ರಮಕ್ಕೆ ಇಂದು ಅಧಿಕೃತ ಚಾಲನೆ ಸಿಗಲಿದೆ. ಮುಖ್ಯಮಂತ್ರಿ
ಡಿ.ಕೆ ಶಿವಕುಮಾರ್(DK Shivakumar) ಅವರ ಕನಸಿನ ಕೂಸಾಗಿರುವ ಈ ವಿಶಿಷ್ಟ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಇಂದು ಕೆಆರ್ಎಸ್ನ (KRS) ಬೃಂದಾವನದಲ್ಲಿ ಚಾಲನೆ ದೊರೆಯಲಿದೆ. ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಗಂಗಾರತಿ ಮಾದರಿಯಲ್ಲೇ, ವಿಶೇಪ ತರಬೇತಿ ಪಡೆದ 12 ರಿಂದ 13 ಜನರ ಅನುಭವಿ ವೈದಿಕರ ತಂಡದಿಂದ ವೈಭವೋಪೇತವಾಗಿ ಕಾವೇರಿ ಆರತಿ ನಡೆಯಲಿದೆ. ಇದನ್ನೂ ಓದಿ: ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ
ಇಂದಿನಿಂದ ಮುಂದಿನ 6 ದಿನಗಳ ಕಾಲ ನಿರಂತರವಾಗಿ ಈ ವಿಶೇಷ ಆರತಿ ಕಾರ್ಯಕ್ರಮ ಜರುಗಲಿದೆ. ಕಾವೇರಿ ಆರತಿಯ ದಿವ್ಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದ್ದು, ವೀಕ್ಷಣೆಗಾಗಿ ವಿಶೇಷ ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ.
ಕಾವೇರಿ ಮಾತೆಯ ದಿವ್ಯ ಸ್ವರೂಪವನ್ನು ಕಣ್ತುಂಬಿಕೊಳ್ಳಲು ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಈ ಬಾರಿಯ ಕಾವೇರಿ ಆರತಿಯು ಕಣ್ಣಿಗೆ ಹಬ್ಬವನ್ನುಂಟು ಮಾಡಲಿದೆ.ಇದನ್ನೂ ಓದಿ: ಎಲ್ಲಾ ಸಂಸ್ಥೆಗಳು ದೇಶದ ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡಬೇಕು – ಸ್ಟಾರ್ಲಿಂಕ್ ಬಗ್ಗೆ ಮೌನ ಮುರಿದ ರಿಲಯನ್ಸ್!

