ಬೆಂಗಳೂರು: ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸದ್ಯದಲ್ಲೇ ವಿಶೇಷ ತನಿಖಾ ತಂಡದ ಎದುರು ಶರಣಾಗಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ನಡುವೆ ಸ್ಫೋಟಕ ರಹಸ್ಯವೊಂದು ಬಯಲಾಗಿದೆ.
ಯಾರೊಂದಿಗೂ ಸಂಪರ್ಕದಲ್ಲಿಲ್ಲದ ಪ್ರಜ್ವಲ್ ರೇವಣ್ಣ ಆ ಒಂದು ನಂಬರ್‌ಗೆ (Mobile Number) ಮಾತ್ರ ದಿನಕ್ಕೆ ಎರಡು ಬಾರಿ ಕರೆ ಮಾಡುತ್ತಿದ್ದಾರೆ. ಅಷ್ಟಕ್ಕೂ ಪ್ರಜ್ವಲ್ ಕರೆ ಮಾಡುತ್ತಿರುವುದು ಬೇರೆ ಯಾರಿಗೂ ಅಲ್ಲ, ತಾನೂ ಮದುವೆ ಆಗಬೇಕು ಅಂದುಕೊಂಡಿದ್ದ ಯುವತಿಗೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೊಳಕು ಕೃತ್ಯಗಳನ್ನು ಸೃಷ್ಟಿಸಿದವರಿಗೆ ಕಾನೂನಿನಡಿ ಶಿಕ್ಷೆಯಾಗಬೇಕು- ಹರ್ಷಿಕಾ ಆಗ್ರಹ
ಇದೇ ತಿಂಗಳಲ್ಲಿ ಪ್ರಜ್ವಲ್ ಆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡ್ಕೋಬೇಕು ಅಂದುಕೊಂಡಿದ್ದರಂತೆ, ಆ ಹುಡುಗಿಗೆ ದಿನಕ್ಕೆರಡು ಬಾರಿ ಫೋನ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಮಾಹಿತಿ ತಿಳಿದಕೂಡಲೇ ಎಸ್‌ಐಟಿ ಆ ಯುವತಿಯ ಚಲನವಲನಗಳ ಮೇಲೆ ನಿಗಾ ವಹಿಸಿದೆ. ಆ ಮೂಲಕ ಪ್ರಜ್ವಲ್ ಎಲ್ಲಿದ್ದಾರೆ ಎಂಬ ಹುಡುಕಾಟವೂ ನಡೆಯುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಕೋವಿಡ್ ಲಸಿಕೆ ಪಡೆದ ಯುವಜನರು ಹೃದಯಾಘಾತದಿಂದ ಸಾಯುತ್ತಿದ್ದಾರೆ: ಪ್ರಿಯಾಂಕಾ ಆತಂಕ
ಮಂಗಳೂರಿನಲ್ಲಿ ಶರಣಾಗ್ತಾರಾ ಪ್ರಜ್ವಲ್?
ಸದ್ಯ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಇಂದು ಶರಣಾಗ್ತಾರಾ? ಎಂಬ ಪ್ರಶ್ನೆ ಎದ್ದಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್‌ಡಿ ರೇವಣ್ಣ (HD Revanna) ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಇಂದು ಪ್ರಜ್ವಲ್ ರೇವಣ್ಣ ಶರಣಾಗ್ತಾರಾ?
ಇಂದು (ಮೇ 5) ಮಂಗಳೂರು ವಿಮಾನ ನಿಲ್ದಾಣಕ್ಕೆ (Mangaluru Airport) ಪ್ರಜ್ವಲ್ ಆಗಮಿಸುವ ಸಾಧ್ಯತೆಯಿದೆ. ಸದ್ಯ ಪ್ರಜ್ವಲ್ ಯುಎಇಯಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲುಕೌಟ್ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ವಿಮಾನದಿಂದ ಇಳಿದು ವಲಸೆ ಕೇಂದ್ರದ ಬಳಿಯೇ ಬಂಧನವಾಗುವ ಸಾಧ್ಯತೆಯಿದೆ. ಈಗಾಗಲೇ ಅಬುಧಾಬಿಯಿಂದ ಬೆಳಗ್ಗೆ 6:24ಕ್ಕೆ ಆಗಮಿಸಿದ ವಿಮಾನಲ್ಲಿ ಪ್ರಜ್ವಲ್ ಬಂದಿಲ್ಲ. ದುಬೈನಿಂದ ಆಗಮಿಸುವ 2ನೇ ವಿಮಾನ ಬೆಳಗ್ಗೆ 7:55ಕ್ಕೆ ಲ್ಯಾಂಡ್ ಆಗಲಿದೆ. ದುಬೈನಿಂದ ಸಂಜೆ 6:15ಕ್ಕೆ ಮತ್ತೊಂದು ವಿಮಾನ ಬರಲಿದೆ. ಕುವೈಟ್‌ನಿಂದ 6:40ಕ್ಕೆ ವಿಮಾನ ಬರಲಿದೆ. ಈ ವಿಮಾನಗಳ ಪೈಕಿ ಒಂದು ವಿಮಾನದಲ್ಲಿ ಪ್ರಜ್ವಲ್ ಬಂದು ಶರಣಾಗಬಹುದು ಎನ್ನಲಾಗುತ್ತಿದೆ.