ಮಡಿಕೇರಿ: ಸಿಎಎ(ಪೌರತ್ವ ತಿದ್ದುಪಡಿ ಕಾಯ್ದೆ) ಮತ್ತು ಎನ್ಆರ್ಸಿ (ರಾಷ್ಟ್ರೀಯ ನಾಗರಿಕ ನೊಂದಣಿ) ಕಾಯ್ದೆ ವಿರೋಧ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳು ಜಿಲ್ಲೆಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ.
ಕೊಡಗು ಮತೀಯವಾಗಿ ಅತೀ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಇಂದಿನಿಂದ 21ರ ಮಧ್ಯರಾತ್ರಿವರೆಗೆ ಕೊಡಗಿನಲ್ಲಿ ನಿಷೇಧಾಜ್ಞೆ ಹೊರಡಿಸುವಂತೆ ಕೊಡಗು ಎಸ್ಪಿ ಸುಮನ್ ಡಿ ಪನ್ನೇಕರ್ ಜಿಲ್ಲಾಧಿಕಾರಿಗೆ ಅನೀಸ್ ಕಣ್ಮಣಿ ಜಾಯ್ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮನವಿ ಪುರಸ್ಕರಿಸಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
Advertisement
Advertisement
ಸಾರ್ವಜನಿಕ ಶಾಂತಿ, ನೆಮ್ಮದಿಗೆ ಭಂಗ ತರದಂತೆ ಕ್ರಮ ಕೈಗೊಳ್ಳಲಾಗಿದ್ದು, ಎಸ್‍ಪಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಪ್ರತಿಭಟನೆ, ಮೆರವಣಿಗೆ ಹಾಗೂ ದಿಕ್ಕಾರ ಕೂಗುವ ಕಾರ್ಯಕ್ರಮ ನಡೆಸುವಂತಿಲ್ಲ. ಐದಕ್ಕಿಂತ ಹೆಚ್ಚು ಜನರು ಒಂದೆಡೆ ಗುಂಪು ಗೂಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Advertisement
ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಡಿಸಿ ಅವರು ಎಚ್ಚರಿಕೆ ಕೂಡ ನೀಡಿದ್ದಾರೆ. ಸದ್ಯ ಮಡಿಕೇರಿಯಲ್ಲಿ ಬೆಳಗ್ಗೆಯಿಂದಲೂ ಸಹಜ ಸ್ಥಿತಿಯಿದ್ದು, ಎಂದಿನಂತೆ ಸಾರ್ವಜನಿಕ ಚಟುವಟಿಕೆ ಆರಂಭವಾಗಿದೆ. ಶಾಲಾ ಕಾಲೇಜು ಕಡೆಗೆ ವಿದ್ಯಾರ್ಥಿಗಳು ತೆರೆಳುತ್ತಿದ್ದಾರೆ.