ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡುವ ಹಿನ್ನೆಲೆಯಲ್ಲಿ ಇಂದು ಸಹ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಮುಂದುವರಿಯಲಿದೆ. ಗುರುವಾರ ನಗರದಲ್ಲಿ ನಿಷೇಧಾಜ್ಞೆ ಇದ್ದರೂ ಹಲವಾರು ಮಂದಿ ಪ್ರತಿಭಟನೆ ನಡೆಸಿದರು.
ಗುರುವಾರ 244 ಜನರನ್ನು ವಶಕ್ಕೆ ಪಡೆದಿದ್ದ ಪೊಲೀಸರು 8 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆ. ನಗರದಲ್ಲಿ ಇಂದು ಸಹ ಕೆಲವರು ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಳ ಮಾಡುಕೊಂಡಿರುವ ಪೊಲೀಸರು ಪ್ರತಿಭಟನೆ ಮಾಡದಂತೆ ಕರೆ ನೀಡಿದ್ದಾರೆ.
Advertisement
Advertisement
ಪೊಲೀಸರ ಜೊತೆಗೆ ಕೆಎಸ್‍ಆರ್‍ಪಿ ಹಾಗೂ ಸಿಎಆರ್ ತುಕಡಿಗಳ ನಿಯೋಜನೆ ಮಾಡಿಕೊಂಡಿದ್ದು, ಟೌನ್ ಹಾಲ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಹೆಚ್ಚು ಪೊಲೀಸರನ್ನು ಭದ್ರತೆಗೆ ಬಳಸಿಕೊಂಡಿದ್ದಾರೆ.
Advertisement
ಗುರುವಾರ ಬೆಳಗ್ಗೆ 10 ಗಂಟೆವರೆಗೆ ಸಹಜವಾಗಿದ್ದ ಸಿಲಿಕಾನ್ ಸಿಟಿ 10 ಗಂಟೆಯ ನಂತರ ನಿಷೇಧಜ್ಞೆಯ ನಡುವೆಯೂ ಸಾವಿರಾರು ಮಂದಿ ಟೌನ್‍ಹಾಲ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ಮಾಡಿದ್ದರು.