ಬೆಂಗಳೂರು: ನಗರದಾದ್ಯಂತ ಇಂದು ಸಹ ನಿಷೇಧಾಜ್ಞೆ ಜಾರಿಯಲ್ಲಿದ್ದು ಪೌರತ್ವ ಕಾಯ್ದೆ ವಿರೋಧಿಸಿ ಮತ್ತು ಪರವಾಗಿ ಯಾವುದೇ ಪ್ರತಿಭಟನೆ ಹಾಗೂ ಮೆರವಣಿಗೆ ಮಾಡದಂತೆ ಪೊಲೀಸರು ನಿಷೇಧಾಜ್ಞೆಯನ್ನು ಹೊರಡಿಸಿದ್ದಾರೆ. ಗುರುವಾರ ಮತ್ತು ಶುಕ್ರವಾರ ನಗರದಲ್ಲಿ ನಿಷೇಧಾಜ್ಞೆ ಇದ್ದರೂ ಹಲವಾರು ಮಂದಿ ಪ್ರತಿಭಟನೆ ಮಾಡಲು ಮುಂದಾಗಿದ್ದರು.
ನಗರದಲ್ಲಿ ಇಂದು ಸಹ ಕೆಲವರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆಯನ್ನು ಹೆಚ್ಚಳ ಮಾಡಿಕೊಂಡಿದ್ದಾರೆ. ಪೊಲೀಸರ ಜೊತೆಗೆ ಕೆಎಸ್‍ಆರ್ ಪಿ ಹಾಗೂ ಸಿಎಆರ್ ತುಕಡಿಗಳ ನಿಯೋಜನೆ ಮಾಡಿಕೊಂಡಿರುವ ಪೊಲೀಸ್ ಇಲಾಖೆ ರಾಜಧಾನಿಯಲ್ಲಿ ಯಾವುದೇ ಪ್ರತಿಭಟನೆ ಹಾಗೂ ಮೆರವಣಿಗೆ ಆಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.
Advertisement
Advertisement
ಇಂದು ಬೆಂಗಳೂರು ಎಂದಿನಂತೆ ಸಹಜ ಸ್ಥಿತಿಯಲ್ಲಿದೆ. 10 ಗಂಟೆಯ ಬಳಕ ಪ್ರತಿಭಟನೆ ಆಗುವ ಸಾಧ್ಯತೆಗಳಿವೆ. ಶಿವಾಜಿನಗರದಲ್ಲಿ ಒಂದು ಕೆಎಸ್‍ಆರ್ ಪಿ ತುಕಡಿ ನಿಯೋಜನೆ ಮಾಡಿದ್ದು ಯಾವುದೇ ಪ್ರತಿಭಟನೆಯಾಗದಂತೆ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಶುಕ್ರವಾರ ಶಿವಾಜಿನಗರದ ಗಲ್ಲಿ ಗಲ್ಲಿಯಲ್ಲಿ ಪೊಲೀಸರು ಪೇರಡ್ ಮಾಡಿ ಜನರು ಆತಂಕ ಪಡುವ ಆಗತ್ಯವಿಲ್ಲ ಜೊತೆಗೆ ಪ್ರತಿಭಟನೆ ಮಾಡಬಾರದು ಎಂದು ತಿಳಿಸಿದ್ದಾರೆ.