ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹಾಗೂ ಸುರತ್ಕಲ್‌ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆಯಿಂದಾಗಿ ಬೂದಿಮುಚ್ಚಿದ ಕೆಂಡದಂತಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಸಹಜ ಸ್ಥಿತಿಗೆ ಮರಳುತ್ತಿದೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೆ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಅಂಗಡಿ ಮುಂಗಟ್ಟು ಸೇರಿದಂತೆ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ 144 ಸೆಕ್ಷನ್ ಆಗಸ್ಟ್ 14ರ ಮಧ್ಯರಾತ್ರಿ ವರೆಗೂ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್‌ನನ್ನು ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು: ಆರಗ ಜ್ಞಾನೇಂದ್ರ
Advertisement
Advertisement
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹಾಗೂ ಜಿಲ್ಲೆಯ ಸುರತ್ಕಲ್‌ನಲ್ಲಿ ಮಹಮ್ಮದ್ ಫಾಝಿಲ್ ಹತ್ಯೆ ನಡೆದ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು 144 ಸೆಕ್ಷನ್ ಜಾರಿಗೊಳಿಸಿತ್ತು. ಜಿಲ್ಲೆ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಅಗತ್ಯ ವಹಿವಾಟುಗಳಿಗೆ ಅವಕಾಶ ನೀಡಲಾಗುತ್ತಿದೆ.