Dakshina Kannada
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ 144 ಸೆಕ್ಷನ್ ಜಾರಿ!

ಮಂಗಳೂರು: ನಾಳೆ ಚುನಾವಣಾ ಮತ ಎಣಿಕೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಯಾಗಿದೆ.
ನಗರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾನೂನು ಉಲ್ಲಂಘಿಸಿದ್ರೆ ಅಥವಾ ವಿಜಯೋತ್ಸವ ಮಾಡಿದರೆ ಮುಲಾಜಿಲ್ಲದೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಇಂದು ಮಧ್ಯರಾತ್ರಿಯಿಂದ 16ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಾಗಿದ್ದು, ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಾಗಲಿದೆ. ಜಿಲ್ಲೆಯಲ್ಲಿ ಇಂದು ಮಧ್ಯ ರಾತ್ರಿಯಿಂದ ನಾಳೆ ಮಧ್ಯರಾತ್ರಿ ವರೆಗೂ ಮದ್ಯಮಾರಾಟವನ್ನು ಕೂಡ ನಿಷೇಧವಾಗಲಿದೆ ಅಂದ್ರು.
ಮತ ಎಣಿಕೆ ಕಾರ್ಯ ಕ್ರಮಬದ್ಧವಾಗಿರುತ್ತೆ. ನಿಧಾನವಾದರೂ ಗೊಂದಲಕ್ಕೆ ಅವಕಾಶ ಇರೋದಿಲ್ಲ. ಸ್ಟ್ರಾಂಗ್ ರೂಂಗೆ ಮೂರು ಹಂತದ ಭದ್ರತೆ ಮಾಡಲಾಗಿದೆ ಅಂತ ಅವರು ವಿವರಿಸಿದ್ದಾರೆ.
