ಲಕ್ನೋ: ಉತ್ತರಪ್ರದೇಶದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ನಡುವೆ ಸರ್ಕಾರ ಸಿಆರ್‌ಪಿಸಿ (ಕ್ರಿಮಿನಲ್ ಪ್ರೊಸಿಜರ್ ಕೋಡ್)-144 ನಿಷೇಧಾಜ್ಞೆ ಜಾರಿಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ 4 ಅಥವಾ ಅದಕ್ಕಿಂತಲೂ ಹೆಚ್ಚಿನವರು ಒಂದೇ ಸ್ಥಳದಲ್ಲಿ ಗುಂಪುಗೂಡದಂತೆ ಆದೇಶಿಸಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
Advertisement
ಉತ್ತರಪ್ರದೇಶದ ಗೌತಮಬುದ್ಧನಗರ, ಗಾಜಿಯಾಬಾದ್, ಹಂಪುರ್, ಮೀರತ್, ಬುಲಾಂದ್‌ಶಹರ್, ಭಾಗ್‌ಪತ್ ಹಾಗೂ ಲಕ್ನೋ ಪ್ರದೇಶಗಳಲ್ಲಿ ಕೋವಿಡ್ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಗಾಜಿಯಾಬಾದ್‌ನಲ್ಲಿ 65, ಗೌತಮಬುದ್ಧನಗರದಲ್ಲಿ 20 ಹಾಗೂ ಲಕ್ನೋನಲ್ಲಿ 10 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 19 ವಿದ್ಯಾರ್ಥಿಗಳು ಇದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಐಪಿಎಲ್ 2022: ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಮಿಚೆಲ್ ಮಾರ್ಷ್‍ಗೆ ಕೋವಿಡ್ ದೃಢ
Advertisement
Advertisement
ತಿಂಗಳಲ್ಲೇ ಪಾಸಿಟಿವಿಟಿ ದರ ಹೆಚ್ಚಳ: ಉತ್ತರ ಪ್ರದೇಶದಲ್ಲಿ ಮಾಸ್ಕ್ ಧರಿಸಲು ವಿನಾಯಿತಿ ನೀಡಿದ್ದರಿಂದಾಗಿಯೇ ಕೋವಿಡ್ ಹೆಚ್ಚುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪ್ರಸ್ತುತ ಗಾಜಿಯಾಬಾದ್ ಜಿಲ್ಲೆಯಲ್ಲಿ 332 ಪ್ರಕರಣಗಳು ಕಂಡುಬಂದಿದ್ದು, ಪಾಸಿಟಿವಿಟಿ ದರ ಶೇ.15ರಷ್ಟು ಹೆಚ್ಚಾಗಿದೆ. ಪ್ರತಿದಿನ 1000 ಸಾವಿರ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಏಪ್ರಿಲ್ ತಿಂಗಳಲ್ಲೇ (18 ದಿನಗಳಲ್ಲಿ) ಶೇ2.3 ರಷ್ಟು ಪಾಸಿಟಿವಿಟಿ ದರ ಹೆಚ್ಚಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: 5 ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಕೋವಿಡ್‌ನಿಂದ ಸಾವು: ಕೇಂದ್ರಕ್ಕೆ ರಾಹುಲ್ ತರಾಟೆ
Advertisement
ದೆಹಲಿಯ ನಂತರ ಇದೀಗ ಉತ್ತರಪ್ರದೇಶದಲ್ಲಿಯೂ ವಿದ್ಯಾರ್ಥಿಗಳಿಗೆ ಸೋಂಕು ವ್ಯಾಪಿಸುತ್ತಿದ್ದು, ಸೋಂಕು ಕಾಣಿಸಿಕೊಂಡ ಶಾಲೆಗಳನ್ನು ಕೂಡಲೇ ಬಂದ್ ಮಾಡಿ, ವಿದ್ಯಾರ್ಥಿಗಳನ್ನು ಐಸೊಲೇಶನ್‌ಗೆ ಒಳಪಡಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.