ಮೈಸೂರು: ಚಾಮುಂಡಿ ಬೆಟ್ಟಕ್ಕೆ (Chamundi Hills) ಇಂದು (ಅ.13) ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮಹಿಷ ದಸರಾ (Mahisha Dasara) ಮತ್ತು ಚಾಮುಂಡಿ ಚಲೋ ಜಾಥಾ ಎರಡಕ್ಕೂ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿ 144 ಸೆಕ್ಷನ್ ಜಾರಿಗೊಳಿಸಿದೆ. ಹೀಗಾಗಿ ಚಾಮುಂಡಿಬೆಟ್ಟದ ಪಾದದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಪೊಲೀಸ್ ಆಯುಕ್ತರಾದ ಡಾ.ರಮೇಶ್ ಪುರಭವನದಲ್ಲಿ ಮಹಿಷ ದಸರಾ ಆಚರಿಸಲು ಅನುಮತಿ ನೀಡಿದ್ದು, ವೇದಿಕೆ ಕಾರ್ಯಕ್ರಮಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ಪ್ರಚೋದನಕಾರಿ ಭಾಷಣ ಮಾಡದಂತೆ ಎಚ್ಚರಿಕೆಯನ್ನೂ ನೀಡಲಾಗಿದ್ದು, ಸುಮಾರು 2 ಸಾವಿರ ಮಂದಿ ಪೊಲೀಸ್ (Mysuru City Police) ಭದ್ರತೆಯನ್ನು ನಿಯೋಜಿಸಲಾಗಿದೆ. ಸದ್ಯ ಎರಡೂ ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದ್ದು, ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದನ್ನೂ ಓದಿ: ಮಹಿಷಾ ದಸರಾ ಪರ, ವಿರೋಧ – ಮೈಸೂರಿನಲ್ಲಿ ಸೆಕ್ಷನ್ 144 ಜಾರಿ
ಚಾಮುಂಡಿ ಕಾಲ್ಪನಿಕ, ಮಹಿಷಾ ಇತಿಹಾಸ ಪುರುಷ:
ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಮಾತನಾಡಿ, ನಾವು ಜನಪದದಲ್ಲಿ ಬರುವ ಚಾಮುಂಡಿಯ ಪ್ರಸಂಗ ಹೇಳಿದ್ದೇವೆ. ಆದರೆ ನಾವು ಚಾಮುಂಡಿಯನ್ನು ನಿಂದಿಸಿಲ್ಲ. ನಮಗೆ ಮಹಿಷನ ಮೇಲೂ ಭಕ್ತಿ ಗೌರವವಿದೆ, ಚಾಮುಂಡಿ ಮೇಲೂ ಇದೆ. ನೀವು ಮಹಿಷನ ಹಿನ್ನೆಲೆ ಕೇಳಿದ್ರೆ, ನಾವು ಚಾಮುಂಡಿ ಹಿನ್ನೆಲೆ ಕೇಳ್ತಿವಿ. ಚಾಮುಂಡಿ ಕಾಲ್ಪನಿಕ, ಮಹಿಷ ಇತಿಹಾಸ ಪುರುಷ ಅನ್ನೋದು ಸತ್ಯ ಎಂದು ನುಡಿದಿದ್ದಾರೆ.
ಚಾಮುಂಡಿ ಕೀಳಾಗಿ ಮಾತಾಡಲ್ಲ:
ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಮಾತನಾಡಿ, ಚಾಮುಂಡಿ ದೇವಿ ಬಗ್ಗೆ ನಮ್ಮಲೇ ಕೆಲವರು ಕೆಟ್ಟದಾಗಿ ಮಾತನಾಡಿದ್ದು ತಪ್ಪು. ಆ ತಪ್ಪು ಮುಂದೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಾಮುಂಡೇಶ್ವರಿ ಬಳಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾ ವಿರೋಧ ಮಾಡಬೇಕು: ಪ್ರತಾಪ್ ಸಿಂಹ
ಬೆಟ್ಟದಲ್ಲಿ ಮಹಿಷ ದಸರಾಕ್ಕೆ ಬ್ರೇಕ್ ಬಿದ್ದಿದ್ದು ಸಮಾಧಾನ:
ಬಿಜೆಪಿ ಶಾಸಕ ಶ್ರೀವತ್ಸ ಟಿ.ಎಸ್ ಶ್ರೀವತ್ಸ ಮಾತನಾಡಿ, ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ನಡೆಸುವುದು ನಿಲ್ಲಿಸೋದೇ ನಮ್ಮ ಉದ್ದೇಶವಾಗಿತ್ತು. ಆ ಕೆಲಸದಲ್ಲಿ ನಮಗೆ ಜಯ ಸಿಕ್ಕಿದೆ. ಮಹಿಷಾ ದಸರಾ ತಡೆಯಲು ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿದ್ದೇವು. ಈಗ ಅದಕ್ಕೆ ಬ್ರೇಕ್ ಬಿದ್ದಿದೆ. ಇದು ನಮಗೆ ಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್
Web Stories