ನವದೆಹಲಿ: ಅಧಿವೇಶನ (Session) ನಡೆಯುತ್ತಿರುವಾಗಲೇ ಸಂಸತ್‌ನಲ್ಲಿ ಭದ್ರತಾ ಲೋಪ (Security Breach) ನಡೆದಿದೆ.
ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ (Lok Sabha Visitors Gallery) ಇಬ್ಬರು ವ್ಯಕ್ತಿ ಮೇಲಿನಿಂದ ಜಿಗಿದಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಇಬ್ಬರನ್ನು ಹಿಡಿದಿದ್ದಾರೆ.
Advertisement
ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು.
Advertisement
Advertisement
ಈಗ ಬಂದಿರುವ ಮಾಹಿತಿ ಪ್ರಕಾರ ಒಟ್ಟು ಎರಡು ಘಟನೆ ನಡೆದಿದೆ. ಇಬ್ಬರು ಅನಾಮಿಕ ವ್ಯಕ್ತಿಗಳು ಲೋಕಸಭೆ ಗ್ಯಾಲರಿಯಿಂದ ಜಿಗಿದು ಕಲರ್ ಬಾಂಬ್ ಸಿಡಿಸಿದರೆ, ಇಬ್ಬರು ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ. ಈಗ ನಾಲ್ವರನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.
Advertisement
ಸಂಸತ್ ಒಳ ಪ್ರವೇಶಕ್ಕೆ ಪಾಸ್ ಇಲ್ಲದೇ ಯಾರನ್ನು ಬಿಡಲ್ಲ. ಹೀಗಿರುವಾಗ ಇಷ್ಟೊಂದು ದೊಡ್ಡ ಮಟ್ಟದ ಭದ್ರತಾ ಲೋಪ ನಡೆದಿದ್ದು ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.