ಜಗದಲ್‌ಪುರ: ಛತ್ತೀಸ್‌ಗಢದ (Chhattisgarh) ದಂತೇವಾಡ (Dantewada) ಮತ್ತು ಬಿಜಾಪುರ (Bijapura) ಜಿಲ್ಲೆಗಳ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ.
ಮಂಗಳವಾರ ಬೆಳಗ್ಗೆ ನಡೆದ ಈ ಎನ್‌ಕೌಂಟರ್, ನಕ್ಸಲೀಯರ ವಿರುದ್ಧ ಭದ್ರತಾ ಪಡೆಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆಯ ಭಾಗವಾಗಿ ಸಂಭವಿಸಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ತಿಳಿಸಿದೆ. ಗುಪ್ತಚರ ಮಾಹಿತಿಗಳ ಪ್ರಕಾರ, ಈ ಪ್ರದೇಶದಲ್ಲಿ ನಕ್ಸಲರು ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ನಿಖರ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಛತ್ತೀಸ್‌ಗಢ ರಾಜ್ಯ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯ ಜಂಟಿ ತಂಡ ಸೋಮವಾರ ರಾತ್ರಿಯಿಂದಲೇ ಶೋಧ ಕಾರ್ಯಾಚರಣೆಗೆ ತೆರಳಿತ್ತು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಡಿಕೆಶಿಯವರು ಸ್ಟಾಲಿನ್‌ರನ್ನು ಒಪ್ಪಿಸಲಿ: ನಿಖಿಲ್ ಸವಾಲ್
ಮಂಗಳವಾರ ಈ ತಂಡವು ಕಾಡಿನ ಒಳಗೆ ಮುನ್ನಡೆಯುತ್ತಿದ್ದಾಗ, ಅಡಗಿದ್ದ ನಕ್ಸಲರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದರು. ಈ ದಾಳಿಗೆ ತಕ್ಷಣವೇ ಪ್ರತಿಕ್ರಿಯಿಸಿದ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ನಡೆದ ಈ ಗುಂಡಿನ ಕಾಳಗದಲ್ಲಿ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಮೂವರು ನಕ್ಸಲರ ಮೃತದೇಹ ಸಿಕ್ಕಿದೆ. ಇದನ್ನೂ ಓದಿ: ರೀಲ್ಸ್ ತಂದ ಸಂಕಷ್ಟ: ವಿಚಾರಣೆಗೆ ಜೊತೆಯಾಗಿ ಹಾಜರಾದ ವಿನಯ್, ರಜತ್
ಮೃತರ ಗುರುತು ಇನ್ನೂ ಖಚಿತವಾಗಿಲ್ಲವಾದರೂ, ಇವರು ಸ್ಥಳೀಯ ಮಾವೋವಾದಿ ಗುಂಪಿನ ಸದಸ್ಯರಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಒಂದು ಎಕೆ-47 ರೈಫಲ್, ಎರಡು ಸ್ಥಳೀಯವಾಗಿ ತಯಾರಿಸಿದ ಬಂದೂಕುಗಳು, ಸ್ಫೋಟಕ ವಸ್ತುಗಳು ಮತ್ತು ಗುಂಡುಗಳನ್ನು ಒಳಗೊಂಡ ಶಸ್ತ್ರಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ, ನಕ್ಸಲರ ಬಳಕೆಯ ದಿನಚರಿ ವಸ್ತುಗಳು, ಕೆಲವು ದಾಖಲೆಗಳು ಮತ್ತು ಸಂಪರ್ಕ ಸಾಧನಗಳು ಸಹ ದೊರೆತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾಡ್ತೀನಿ ಅಂದರೆ ಜನರೇ ಡಿಕೆಶಿ ನೆಟ್ಟು-ಬೋಲ್ಟ್ ಟೈಟ್ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ
ಈ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ದೃಢಪಡಿಸಲಾಗಿದೆ. ಆದಾಗ್ಯೂ, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ತಪಾಸಣೆ ಮತ್ತು ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಒಂದೇ ದಿನ ಎರಡು ಕಡೆ 80 ಕ್ಕೂ ಹೆಚ್ಚು ಹಂದಿಗಳ ಕಳ್ಳತನ – ಕಳ್ಳರ ಕಾಟಕ್ಕೆ ಹೈರಾಣಾದ ಸಾಕಾಣಿಕೆದಾರರು
ಈ ಘಟನೆ ಕುರಿತು ಪ್ರತಿಕ್ರಿಯಿಸಿದ ದಂತೇವಾಡ ಜಿಲ್ಲೆಯ ಪೊಲೀಸ್ ಅಧೀಕ್ಷಕರು, ನಕ್ಸಲೀಯರ ವಿರುದ್ಧ ನಮ್ಮ ಕಾರ್ಯಾಚರಣೆಗಳು ಯಶಸ್ವಿಯಾಗಿ ಮುಂದುವರೆದಿವೆ. ಈ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದು, ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ನಾವು ಬದ್ಧರಾಗಿದ್ದೇವೆ. ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಶೀಘ್ರದಲ್ಲಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಣ್ಣ ದೂರು ಕೊಡಬೇಕಲ್ಲವಾ? ನೀವು ಎಷ್ಟು ಬಾರಿ ತಿರುಗಿಸಿ ಮುರುಗಿಸಿ ಕೇಳಿದ್ರು ಅಷ್ಟೇ: ಪರಮೇಶ್ವರ್
ಮಾರ್ಚ್ 20 ರಂದು ಸೈನಿಕರು ಛತ್ತೀಸ್‌ಗಢದ ಬಿಜಾಪುರ ಮತ್ತು ಕಾಂಕೇರ್ ಜಿಲ್ಲೆಗಳಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆದವು. ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 26 ನಕ್ಸಲರು ಹತರಾದರು ಮತ್ತು ಬಿಜಾಪುರ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಒಬ್ಬ ಜವಾನ ಹುತಾತ್ಮರಾದರು. ಇದೇ ಸಮಯದಲ್ಲಿ, ಕಾಂಕೇರ್‌ನಲ್ಲಿ ನಾಲ್ವರು ನಕ್ಸಲರು ಕೊಲ್ಲಲ್ಪಟ್ಟಿದ್ದಾರೆ. ಎಲ್ಲಾ 30 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಬ್ಲಡ್ ಕ್ಯಾನ್ಸರ್‌ನಿಂದ ತಮಿಳು ನಟ ಶಿಹಾನ್ ಹುಸೈನಿ ನಿಧನ