ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ (Wrestling Federation) ಮುಖ್ಯಸ್ಥನ ಮೇಲೆ ಲೈಂಗಿಕ ಕಿರುಕುಳ (Sexual Harassment) ಆರೋಪ ಮಾಡಿದ್ದ ಮಹಿಳಾ ಕುಸ್ತಿಪಟುಗಳ(Wrestlers)ಮನವಿಯ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಇತ್ಯರ್ಥ ಮಾಡಿದೆ.
ಆರೋಪಿ ವಿರುದ್ಧ ಎಫ್‍ಐಆರ್ (FIR) ದಾಖಲಿಸಬೇಕು ಮತ್ತು ದೂರುದಾರರಿಗೆ ಭದ್ರತೆಗಾಗಿ ನೀಡಬೇಕೆಂದು ಕೋರಿ ಮನವಿ ಸಲ್ಲಿಸಿದ್ದೀರಿ. ನಿಮ್ಮ ಎರಡೂ ಮನವಿಯನ್ನು ಈಡೇರಿಸಲಾಗಿದೆ. ಯಾವುದೇ ಹೆಚ್ಚಿನ ಕುಂದುಕೊರತೆಗಳಿದ್ದರೆ ನೀವು ಹೈಕೋರ್ಟ್ ಅಥವಾ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅನ್ನು ಸಂಪರ್ಕಿಸಬಹುದು ಎಂದು ಕುಸ್ತಿಪಟುಗಳ ಪರ ವಕೀಲರಿಗೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (Chief Justice DY Chandrachud), ಪಿ.ಎಸ್.ನರಸಿಂಹ ಹಾಗೂ ಜೆ.ಬಿ.ಪರ್ದಿವಾಲಾ ಅವರ ಪೀಠವು ಆದೇಶಿಸಿ ಅರ್ಜಿಯನ್ನು ವಿಲೇವಾರಿ ಮಾಡಿದೆ. ಇದನ್ನೂ ಓದಿ: ಮೋದಿ ಸಾಕ್ಷ್ಯಾಚಿತ್ರ ಪ್ರಕರಣ – ಬಿಬಿಸಿಗೆ ಸಮನ್ಸ್ ನೀಡಿದ ದೆಹಲಿ ಕೋರ್ಟ್
Advertisement
Advertisement
ಈಗ ನಡೆಯುತ್ತಿರುವ ತನಿಖೆಯನ್ನು ನಿವೃತ್ತ ಅಥವಾ ಸೇವೆಯಲ್ಲಿರುವ ಹೈಕೋರ್ಟ್ ನ್ಯಾಯಾಧೀಶರಿಂದ ಮೇಲ್ವಿಚಾರಣೆ ನಡೆಸಬೇಕೆಂದು ಕೋರಿದ ಮನವಿಯನ್ನು ನಿರಾಕರಿಸಿದ ಕೋರ್ಟ್ ನಿಮ್ಮ ಎಲ್ಲಾ ಮನವಿಗಳನ್ನು ಈಡೇರಿಸಲಾಗಿದೆ ಎಂದು ಹೇಳಿ ಅರ್ಜಿಯನ್ನು ವಿಲೇವಾರಿಗೊಳಿಸಿತು.
Advertisement
Advertisement
ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸಿದ ಮೇಲ್ವಿಚಾರಣಾ ಸಮಿತಿಯ ವರದಿಗಳನ್ನು ಸರ್ಕಾರವು ಪ್ರಕಟಿಸಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ.
ಏಳು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಭೂಷಣ್ ಶರಣ್ ಸಿಂಗ್ ವಿರುದ್ಧ ಎರಡು ಎಫ್‍ಐಆರ್‌ಗಳನ್ನು ದಾಖಲಿಸಿದ್ದಾರೆ. ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ಪ್ರತಿಭಟನೆ ನಡೆಸುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ – ಇಂಟರ್‌ನೆಟ್ ಸ್ಥಗಿತ, ಸ್ಥಳದಲ್ಲಿ ಸೇನೆ