– ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್
ಬೆಂಗಳೂರು: ಉತ್ತರದ ದಾಸನಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಸೆಕ್ಯೂರಿಟಿ ಗಾರ್ಡ್ ಮೇಲೆ ಆರು ಮಂದಿ (Bengaluru Crime) ಯುವಕರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ನಿನ್ನೆ ರಾತ್ರಿ ನಡೆದ ಘಟನೆಯಲ್ಲಿ (Security Guard Attack) ಶಶಿಕಾಂತ್ ಎಂಬುವವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಹೊರ ರಾಜ್ಯದವರು ಎನ್ನಲಾದ ಆರು ಯುವಕರು ಶಶಿಕಾಂತ್ ಅವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಯುವಕರು ಗಾಂಜಾ ಮತ್ತಿನಲ್ಲಿದ್ದರು ಎಂಬ ಆರೋಪವೂ ಕೇಳಿಬಂದಿದೆ.ಇದನ್ನೂ ಓದಿ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ; ಜಾರ್ಖಂಡ್ ಬಂದ್‌ಗೆ ಬಿಜೆಪಿ ಕರೆ
ಘಟನೆ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿದ್ದು, ಆರೋಪಿಗಳ ಪೈಕಿ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ಹಲ್ಲೆಗೊಳಗಾದ ಶಶಿಕಾಂತ್ ಅವರು ಈವರೆಗೂ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾ ಹಾಗೂ ವಾಟ್ಸಪ್‌ಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಆಧರಿಸಿ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣದ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ SIR – ಬೆಂಗಳೂರಿನಲ್ಲೇ 49 ಲಕ್ಷ ಮತದಾರರು ಡೀಲಿಟ್?

