ಬೆಂಗಳೂರು: ಬ್ಯಾಂಕ್ ಕಟ್ಟಡದಲ್ಲೇ ಸೆಕ್ಯುರಿಟಿ ಗಾರ್ಡ್ ಆತ್ಮಹತ್ಯೆಗೆ ಶರಣಾದ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ಬಿಹಾರ ಮೂಲದ ಪಿಂಟು (22) ಆತ್ಮಹತ್ಯೆಗೆ ಶರಣಾದ ಸೆಕ್ಯೂರಿಟಿ ಗಾರ್ಡ್. ಹರಿಶ್ಚಂದ್ರ ಘಾಟ್ ಬಳಿಯ ಹೆಚ್ ಡಿ ಎಫ್ ಸಿ ಬ್ಯಾಂಕ್ ಕೆಳಭಾಗದ ರೈಲಿಂಗ್ ನಲ್ಲಿ ಆತ ನೇಣಿಗೆ ಶರಣಾಗಿದ್ದಾನೆ. ಜಿಐಎಸ್ ಸೆಕ್ಯೂರಿಟಿ ಏಜೆನ್ಸಿಯಲ್ಲಿ ಆತ ಕೆಲಸ ಮಾಡಿಕೊಂಡಿದ್ದ. ಇದನ್ನೂ ಓದಿ: ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
ಇಂದು ಸಂಜೆ 5:30ರ ಸುಮಾರಿಗೆ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ – ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ
