– 750 ಗ್ರಾಂ ಚಿನ್ನ, ಸಿಸಿಟಿವಿ ಕ್ಯಾಮೆರಾದೊಂದಿಗೆ ಪಾರಾರಿ
ಬೆಂಗಳೂರು: ಹಾಡಹಗಲೇ ಸೆಕ್ಯೂರಿಟಿ ಗಾರ್ಡ್ ದಂಪತಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿರುವ ಘಟನೆ ಹೊರವಲಯದ ರಾಮಮೂರ್ತಿನಗರ ಪೋಲಿಸ್ ಠಾಣಾ ವ್ಯಾಪ್ತಿಯ ಹೊರಮಾವು ಗ್ರಾಮದಲ್ಲಿ ನಡೆದಿದೆ.
Advertisement
ಮನೆಯ ಮಾಲೀಕ ಪ್ರವೀಣ್ ಕುಮಾರ್ ಎಂಬವರ ಮನೆಯಲ್ಲಿ ಕಳೆದ ಒಂದು ವರ್ಷದಿಂದ ಸೆಕ್ಯೂರಿಟಿ ಗಾರ್ಡ್ ಆಗಿ ನೇಪಾಳಿ ಮೂಲದ ಮಂಗಲ್ ಹಾಗೂ ಸೌಭಾಗ್ಯ ದೇವಿ ಎಂಬವರು ಕೆಲಸ ಮಾಡುತ್ತಿದ್ದರು. ಬುಧವಾರ ಮುಂಜಾನೆ ಪ್ರವೀಣ್ ದಂಪತಿ ಕೆಲಸದ ನಿಮಿತ್ತ ಹೊರಗಡೆ ತೆರಳಿದ್ದರು.
Advertisement
ಇದೇ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಅರಿತ ಸೆಕ್ಯೂರಿಟಿ ದಂಪತಿ ಮನೆಯಲ್ಲಿನ ಬೀರು ಬೀಗ ಒಡೆದು, ಅದರಲ್ಲಿದ್ದ 750 ಗ್ರಾಂ ಚಿನ್ನಾಭರಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಅಲ್ಲದೇ ಕಳ್ಳತನ ಮಾಡಿರುವ ಸುಳಿವು ಸಿಗಬಾರದೆಂದು ಮನೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾವನ್ನು ಸಹ ಕಳ್ಳತನ ಮಾಡಿದ್ದಾರೆ.
Advertisement
Advertisement
ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆ ಮಾಲೀಕ ಪ್ರವೀಣ್ ದಂಪತಿ ಮನೆಗೆ ವಾಪಸ್ಸಾದಾಗ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಪ್ರವೀಣ್ ಅವರು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಖತರ್ನಾಕ್ ದಂಪತಿಯ ಹುಡುಕಾಟಕ್ಕೆ ಶೋಧ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv