LatestMain PostNational

ರೋಗಿಗೆ ಇಂಜೆಕ್ಷನ್ ನೀಡಿದ ಸೆಕ್ಯೂರಿಟಿ ಗಾರ್ಡ್

ಭುವನೇಶ್ವರ: ಒಡಿಶಾದ ಅಂಗುಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ರೋಗಿಗಳಿಗೆ ಇಂಜೆಕ್ಷನ್ ನೀಡುತ್ತಿರುವ ವಿಚಾರ ಬಹಿರಂಗಗೊಂಡಿದೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ವೀಡಿಯೋವನ್ನು ಆಸ್ಪತ್ರೆಗೆ ಭೇಟಿ ನೀಡಿದ್ದ ರೋಗಿಯ ಸಂಬಂಧಿಯೊಬ್ಬರು ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸಣ್ಣ ಅಪಘಾತದಿಂದಾಗಿ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ವೈದ್ಯರ ಬದಲಾಗಿ ಸೆಕ್ಯೂರಿಟಿ ಗಾರ್ಡ್ ಇಂಜೆಕ್ಷನ್ ನೀಡಿದ್ದಾರೆ. ಇದನ್ನೂ ಓದಿ: ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಅನ್ನಲು ಸಂಬರ್ಗಿ ಬಳಿ ದಾಖಲೆ ಏನಿದೆ..?: ಚಂದ್ರಚೂಡ್

ಇನ್ನೂ ವೈದ್ಯರು ಮತ್ತು ನರ್ಸ್ ಏಕೆ ರೋಗಿಗೆ ಇಂಜೆಕ್ಷನ್ ನೀಡಲಿಲ್ಲ ಎಂಬ ಪ್ರಶ್ನೆಗೆ, ಸಹಾಯಕ ಮುಖ್ಯ ವೈದ್ಯಕೀಯ ಅಧೀಕ್ಷಕ ಮಾನಸ್ ರಂಜನ್ ಬಿಸ್ವಾಲ್ ನಾವು ಈ ಬಗ್ಗೆ ವಿಚಾರಣೆ ಆರಂಭಿಸಿದ್ದೇವೆ ಮತ್ತು ತನಿಖೆಯ ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಅರವಿಂದ್ ವೀಡಿಯೋ ಮಾಡಿ ಅದನ್ನು ಟ್ರೋಲಿಗನಿಗೆ ಸಂಬರ್ಗಿ ಕೊಟ್ಟ: ಚಂದ್ರಚೂಡ್

ಈ ಮುನ್ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರದೀಪ್ತ ಕುಮಾರ್ ಮೊಹಾಪಾತ್ರ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ಸಹಾಯ ಮಾಡಲು ಆರೋಗ್ಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗುವುದಿಲ್ಲ ಎಂದು ನಿರ್ದೇಶಿಸಿದ್ದರು.

Leave a Reply

Your email address will not be published. Required fields are marked *

Back to top button