ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ, ಅನುಮಾನಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಮಲಬಾರ್ ಹಿಲ್‍ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಧೂಲೆ ನಿವಾಸಿ ಹೇಮಂತ್ ಪವಾರ್ (32) ವ್ಯಕ್ತಿಯನ್ನು ಬಂಧಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಈ ವಾರದ ಆರಂಭದಲ್ಲಿ ಮುಂಬೈಗೆ(Mumbai) ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಭದ್ರತೆಯಲ್ಲಿ ಲೋಪವಾಗಿದೆ(Security Lapse) ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ
Advertisement
Advertisement
ಹೇಮಂತ್ ಪವಾರ್ ಆಂಧ್ರಪ್ರದೇಶ ಸಂಸದರೊಬ್ಬರ ಸಹಾಯಕನಂತೆ ನಟಿಸುತ್ತಿದ್ದ ಎನ್ನಲಾಗಿದೆ. ಈತ ಗೃಹ ಸಚಿವಾಲಯದ ಐ-ಕಾರ್ಡ್ ಹಾಕಿಕೊಂಡು ಗಂಟೆಗಟ್ಟಲೆ ಅಮಿತ್ ಶಾ ಅವರ ಸುತ್ತ ತಿರುಗಾಡಿದ್ದ. ಅನುಮಾನಗೊಂಡ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಪವಾರ್ ಅವರನ್ನು ಪ್ರಶ್ನಿಸಿದ್ದಾರೆ. ಆ ಸಂದರ್ಭದಲ್ಲಿ ಆತ ನಕಲಿ ಅಧಿಕಾರಿ ಎಂಬ ವಿಷಯ ತಿಳಿದಿದೆ. ಈ ಹಿನ್ನೆಲೆಯಲ್ಲಿ ಪವಾರ್‌ನನ್ನು ಬಂಧಿಸಿ,(Arrest) ಆತನನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ಪರಿಶೀಲನೆ