ಕಲಬುರಗಿ: ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಆಗಮಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಅವರ ಹೆಲಿಕಾಪ್ಟರ್ (Helicopter) ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ ಎದುರಾಗಿದೆ.
Advertisement
ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್‌ಗೆ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಲ್ಯಾಂಡಿಂಗ್ ವೇಳೆಯಲ್ಲಿ ಭಾರೀ ಗಾಳಿ ಬೀಸಿದ ಪರಿಣಾಮ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಏಕೆಂದರೆ ಹೆಲಿಪ್ಯಾಡ್ ಸುತ್ತ ಜಮೀನಿನಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಹಾಕಲಾಗಿದ್ದು, ಲ್ಯಾಂಡಿಂಗ್ ವೇಳೆ ಅವು ಹೆಲಿಕಾಪ್ಟರ್ ಮೇಲೆ ಹಾರಿ ಬಂದಿವೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲಟ್, ಹೆಲಿಕಾಪ್ಟರ್ ಅನ್ನು ಬೇರೆಡೆಗೆ ತೆಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ದಿಂಬು, ಹಾಸಿಗೆ, ಬಿಸ್ಕೆಟ್, ಕಾಫಿಯಲ್ಲೂ ಭ್ರಷ್ಟಾಚಾರ ಮಾಡಿದೆ: ಬೊಮ್ಮಾಯಿ
Advertisement
Advertisement
ಲ್ಯಾಂಡಿಂಗ್ ವೇಳೆ ಹಾರಿ ಬಂದ ಪ್ಲಾಸ್ಟಿಕ್ ಚೀಲಗಳನ್ನು ತಕ್ಷಣ ಪೋಲಿಸರು ತೆರವು ಮಾಡಿದ್ದು, ನಂತರ ಒಂದೆರಡು ಸುತ್ತು ಹಾರಾಟ ನಡೆಸಿ, ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ್ದಾರೆ.
Advertisement
ಹೆಲಿಕಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿ ಬಂದಿದ್ದರಿಂದ ಅಧಿಕಾರಿಗಳು ಮತ್ತು ಪೋಲಿಸರು ಕಕ್ಕಾಬಿಕ್ಕಿಯಾಗಿ ಓಡಾಡಿದ್ದರು. ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದೆ ಇರುವುದರಿಂದ ಭದ್ರತಾ ಲೋಪ ಎದುರಾಗಿದೆ. ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‍ಗೆ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ