ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ನ್ಯಾ.ವಿಶ್ವನಾಥ್ ಶೆಟ್ಟಿ ಅವರ ಮೇಲಿನ ಇರಿತ ಪ್ರಕರಣದವಾದ ಬಳಿಕ ಎಚ್ಚೆತ್ತು ಸರ್ಕಾರ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಈ ಸಂಬಂಧ ಭದ್ರತೆಯನ್ನು ಬಿಗಿಗೊಳಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಇದು ಸರ್ಕಾರ ಏನ್ರೀ? ಮೊದಲು ಈ ಸರ್ಕಾರ ತೊಲಗಬೇಕು: ಮಾಜಿ ಉಪಲೋಕಾಯುಕ್ತ ಚಂದ್ರಶೇಖರಯ್ಯ
Advertisement
Advertisement
ಸುತ್ತೋಲೆಯಲ್ಲಿ ಏನಿದೆ?
ಪ್ರಸ್ತುತ ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡಗಳಿಗೆ ಪ್ರವೇಶ ಬಯಸುವ ಸಾರ್ವಜನಿಕರನ್ನು ತಪಾಸಣೆಗೊಳಪಡಿಸಿ ಅವರುಗಳ ಬ್ಯಾಗ್ ಗಳನ್ನು ಸಹ ಸ್ಕ್ಯಾನ್ ಮಾಡಲಾಗುತ್ತಿದೆ. ಮಾರ್ಚ್ 7ರಂದು ಲೋಕಾಯುಕ್ತರ ಕಛೇರಿಯಲ್ಲಿ ನಡೆದ ಘಟನೆಯಿಂದಾಗಿ ಭದ್ರತಾ ವ್ಯವಸ್ಥೆಯಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ. ಆದ್ದರಿಂದ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಲ್ಲಿನ ಸಚಿವಾಲಯದ ಎಲ್ಲ ಕಛೇರಿಗಳೂ ಸೇರಿದಂತೆ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಗಧಿತ ಸಂದರ್ಶಕರ ಭೇಟಿ ಸಮಯಕ್ಕೆ ಮಿತಿಗೊಳಿಸತಕ್ಕದ್ದು. ಅಷ್ಟೇ ಅಲ್ಲದೇ ಭೇಟಿ ಪಡೆಯುವ ಪ್ರತಿಯೊಬ್ಬ ಸಾರ್ವಜನಿಕರನ್ನು ಕೂಲಂಕುಷ ತಪಾಸಣೆಗೊಳಪಡಿಸಿ ಹಾಗೂ ಅವರುಗಳ ಬ್ಯಾಗೇಜ್ ಗಳನ್ನು ಕಡ್ಡಾಯವಾಗಿ ಸ್ಕ್ಯಾನ್ ಮಾಡಿದ ನಂತರ ಲೋಹ ತಪಾಸಣಾ ಯಂತ್ರದ ಮೂಲಕ ಹಾದು ಹೋಗಲೇಬೇಕೆಂಬ ಪದ್ಧತಿಯನ್ನು ಅನುಸರಿಸಬೇಕು. ಈ ಬಗ್ಗೆ ಯಾವುದೇ ಲೋಪವಾದಲ್ಲಿ ಪೊಲೀಸ್ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿಸಲಾಗುವುದು ಎಂದು ಈ ಮೂಲಕ ಸೂಚನೆಗಳಮನ್ನು ನೀಡಲಾಗಿದೆ. ಇದನ್ನೂ ಓದಿ: ದೂರುಗಳ ಮೇಲೆ ದೂರು ಕೊಟ್ಟರೂ ಪ್ರಯೋಜನ ಆಗಿಲ್ಲ- ಪೊಲೀಸ್ ಮುಂದೆ ತಪ್ಪೊಪ್ಪಿಕೊಂಡ ತೇಜರಾಜ್
Advertisement
Advertisement