ಕಲಬುರಗಿ: ಹೈದರಾಬಾದ್ ಕರ್ನಾಟಕ ಭಾಗದ ನಡೆದಾಡುವ ದೇವರು, ಯಾನಾಗುಂದಿಯ ಮಾತಾ ಮಾಣಿಕೇಶ್ವರಿ ಸಂಸ್ಥಾನದ ಪೀಠಾಧಿಪತಿ ಮಾತಾ ಮಾಣಿಕೇಶ್ವರಿ (87) ಲಿಂಗೈಕ್ಯರಾಗಿದ್ದಾರೆ.
ಮಾತಾ ಮಾಣಿಕೇಶ್ವರಿ ಅಮ್ಮನವರು ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯ ಮಠದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಲಿಂಗೈಕ್ಯರಾಗಿದ್ದಾರೆ.
Advertisement
Advertisement
ಮಾತಾ ಮಾಣಿಕೇಶ್ವರಿ ಅಮ್ಮನವರು ಕರ್ನಾಟಕ, ಆಂಧ್ರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದರು. ಅವರು ಶಿವರಾತ್ರಿಯಂದು ಭಕ್ತರಿಗೆ ಕೊನೆಯದಾಗಿ ದರ್ಶನ ಕೊಟ್ಟಿದ್ದರು.
Advertisement
ಅಮ್ಮನವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಭಕ್ತರು ದೌಡಾಯಿಸುತ್ತಿದ್ದಾರೆ. ಹೀಗಾಗಿ ದೇವಸ್ಥಾನದ ಸುತ್ತಲೂ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದಾರೆ.