ನವದೆಹಲಿ: ದೇಶದ್ರೋಹ ಕಾನೂನನ್ನು (Sedition Law) ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಂಸತ್ತಿನಲ್ಲಿ ತಿಳಿಸಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳನ್ನು ಅಮಿತ್ ಶಾ ಮಂಡಿಸಿದ್ದಾರೆ.
ನೂತನ ಮಸೂದೆಯಲ್ಲಿ ದೇಶದ್ರೋಹ (Sedition) ಎಂಬ ಪದವಿಲ್ಲ. ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳಿಗಾಗಿ ಇರುವ ಕಾನೂನನ್ನು ಐಪಿಸಿ ಸೆಕ್ಷನ್ 150ರ ಅಡಿ ಸೇರಿಸಲಾಗಿದೆ. ದೇಶದ್ರೋಹಕ್ಕೆ ಜೀವಾವಧಿ ಶಿಕ್ಷೆ ಅಥವಾ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ನೀಡಲಾಗುತ್ತದೆ. ಹೊಸ ನಿಬಂಧನೆಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು 7 ವರ್ಷಕ್ಕೆ ಹೆಚ್ಚಿಸಲಾದ ಉಲ್ಲೇಖವಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆಯರ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ, ಗ್ಯಾಂಗ್ ರೇಪ್‌ಗೆ 20 ವರ್ಷ ಜೈಲು – ಲೋಕಸಭೆಯಲ್ಲಿ 3 ಮಸೂದೆ ಮಂಡಿಸಿದ ಅಮಿತ್ ಶಾ
Advertisement
Advertisement
ಕಾನೂನಿನ ಉದ್ದೇಶ ಶಿಕ್ಷಿಸುವುದೇ ಅಲ್ಲ, ನ್ಯಾಯವನ್ನು ಒದಗಿಸುವುದು. ಅಪರಾಧವನ್ನು ನಿಲ್ಲಿಸಲು ಕೈಗೊಳ್ಳುವ ಕ್ರಮವಾಗಿದೆ ಎಂದು ಅವರು ಹೇಳಿದ್ದಾರೆ.
Advertisement
Advertisement
The Indian Penal Code (IPC) ಭಾರತೀಯ ನ್ಯಾಯ ಸಂಹಿತಾವಾಗಿ ಬದಲಾದರೆ Code of Criminal Procedure ಭಾರತೀಯ ನಾಗರೀಕ ಸುರಕ್ಷಾವಾಗಿ ಬದಲಾಗಲಿದೆ. Indian Evidence Act 1860 ಇನ್ನು ಮುಂದೆ ಭಾರತೀಯ ನ್ಯಾಯವಾಗಿ ಬದಲಾಯಿಸುವ ಅಂಶ ಮಸೂದೆಯಲ್ಲಿದೆ.
ಉದ್ದೇಶಪೂರ್ವಕವಾಗಿ ಮಾತನಾಡುವ ಅಥವಾ ಬರೆಯುವ ಮೂಲಕ, ಚಿಹ್ನೆಗಳ ಮೂಲಕ, ಎಲೆಕ್ಟ್ರಾನಿಕ್ ಸಂವಹನದಿಂದ, ಹಣಕಾಸಿನ ನೆರವಿನ ವಿಧಾನಗಳ ಮೂಲಕ, ಯಾವುದೇ ರೀತಿಯಲ್ಲಿ ಪ್ರಚೋದಿಸುವ, ಪ್ರತ್ಯೇಕತೆ, ಸಶಸ್ತ್ರ ದಂಗೆ, ವಿಧ್ವಂಸಕ ಚಟುವಟಿಕೆಗಳು ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಉತ್ತೇಜಿಸುವುದು, ಭಾರತದ ಸಾರ್ವಭೌಮತೆ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡಿದರೆ, ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅವರಿಗೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗಬಹುದು ಎಂದು ಈ ಮಸೂದೆ ಹೇಳುತ್ತದೆ. ಇದನ್ನೂ ಓದಿ: ವಿಪಕ್ಷಗಳ ಮೈತ್ರಿಯಲ್ಲಿರುವ INDIA ಹೆಸರನ್ನು ನಿರ್ಬಂಧಿಸಿ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ
Web Stories