ಮುಂಬೈ: ತನ್ನ ಗರ್ಲ್‍ಫ್ರೆಂಡ್‍ಗೆ ನ್ಯಾಯ ಕೊಡಿಸಲಾಗದೇ 43 ವರ್ಷದ ವ್ಯಕ್ತಿಯೋರ್ವ ದಕ್ಷಿಣ ಮುಂಬೈನಲ್ಲಿರುವ (South Mumbai) ಮಹಾರಾಷ್ಟ್ರ ಸರ್ಕಾರದ (Maharashtra Government) ಪ್ರಧಾನ ಕಚೇರಿಯಾದ ಮಂತ್ರಾಲಯದ (Mantralaya) 6 ನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ.
Advertisement
ಮೇಲಿಂದ ಜಿಗಿದಾಗ ವ್ಯಕ್ತಿಯ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೂ, ನೆಟ್ ಇದ್ದಿದ್ದರಿಂದ ವ್ಯಕ್ತಿ ಬದುಕುಳಿದಿದ್ದಾನೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ರಕ್ಷಿಸಿ, ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಶಬರಿಮಲೆಯಲ್ಲಿ ಪೊಲೀಸರಿಗೆ ನೀಡಿದ್ದ ಕೈಪಿಡಿ ಹಿಂಪಡೆದ ಕೇರಳ ಸರ್ಕಾರ
Advertisement
Advertisement
ಗಾಯಗೊಂಡ ವ್ಯಕ್ತಿಯನ್ನು ಬೀಡ್ ಜಿಲ್ಲೆಯ ನಿವಾಸಿ ಬಾಪು ನಾರಾಯಣ ಮೊಕಾಶಿ ಎಂದು ಗುರುತಿಸಲಾಗಿದೆ. ತನ್ನ ಗೆಳತಿ ಮೇಲೆ ಅತ್ಯಾಚಾರವಾಗಿದ್ದು, ಆಕೆ 2018ರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಂದಿನಿಂದ ತನ್ನ ಗೆಳತಿಗೆ ಸಾವಿಗೆ ನ್ಯಾಯ ದೊರಕಿಸಿಕೊಡಲು ನಿರಂತರವಾಗಿ ಹೋರಾಡುತ್ತಿದ್ದೇನೆ. ಆದರೆ ಯಾವುದೇ ಪ್ರತಿಕ್ರಿಯೆಯನ್ನು ಪಡೆಯಲು ವಿಫಲನಾಗಿದ್ದಾನೆ ಮತ್ತು ಪ್ರಕರಣದ ಬಗ್ಗೆ ಪೊಲೀಸರು ಸೂಕ್ತವಾಗಿ ತನಿಖೆ ನಡೆಸುತ್ತಿಲ್ಲ ಎಂದು ನಾರಾಯಣ ಮೊಕಾಶಿ ಆರೋಪಿಸಿದ್ದಾನೆ.
Advertisement
ಇದೇ ವಿಚಾರವಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿ ಮಾಡಲು ಗುರುವಾರ ಮಧ್ಯಾಹ್ನ 3 ಗಂಟೆಗೆ ಮಂತ್ರಾಲಯಕ್ಕೆ ಆಗಮಿಸಿದ್ದರೂ, ಸಂಪುಟ ಸಭೆ ಹಿನ್ನೆಲೆ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ವ್ಯಕ್ತಿ 3ನೇ ಮಹಡಿಯಿಂದ ಜಿಗಿದಿದ್ದಾನೆ. ಅದೃಷ್ಟವಶಾತ್ ಕಟ್ಟದ ಮೇಲಿಂದ ವ್ಯಕ್ತಿ ಜಿಗಿದರು, ನೆಟ್‍ನಲ್ಲಿ ಸಿಲುಕಿಕೊಂಡಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಆತನ ಎಡ ಹಣೆಯ ಮೇಲೆ ಗಾಯಗಳಾಗಿದ್ದು, ಆತನನ್ನು ರಕ್ಷಿಸಿ ಚಿಕಿತ್ಸೆಗಾಗಿ ಜಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: ಅಮೆರಿಕ ಹೌಸ್ ಸ್ಪೀಕರ್ ಆಗಿ ಐತಿಹಾಸಿಕ ಅವಧಿ ಕೊನೆಗೊಳಿಸಿದ ನ್ಯಾನ್ಸಿ ಪೆಲೋಸಿ