ನೋಯ್ಡಾ: ಗೇಮಿಂಗ್ ಆ್ಯಪ್ ಮೂಲಕ ಪರಿಚಯವಾಗಿ, ಸ್ನೇಹ ಪ್ರೀತಿಗೆ ತಿರುಗಿ, ಪ್ರಿಯಕರನಿಗಾಗಿ ಗಂಡನನ್ನು ಬಿಟ್ಟು 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಹೈದರ್ (Seema Haider) ಹೆಣ್ಣು ಮಗುವಿಗೆ (Girl Baby) ಜನ್ಮ ನೀಡಿದ್ದಾರೆ.
ಗ್ರೇಟರ್ ನೋಯ್ಡಾದಲ್ಲಿರುವ (Greater Noida) ಆಸ್ಪತ್ರೆಯೊಂದರಲ್ಲಿ ಸೀಮಾ ಹೈದರ್ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ದಂಪತಿಯ ವಕೀಲ ಎ.ಪಿ.ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ| ಪೊಲೀಸರ ಕಾರ್ಯಾಚರಣೆ – ಅಕ್ರಮ ಕಬ್ಬಿಣ ಸಾಗಣೆ ದಂಧೆಯಲ್ಲಿ ತೊಡಗಿದ್ದ 6 ಮಂದಿಯ ಬಂಧನ
ಸೀಮಾ ಹೈದರ್ ಆನ್‌ಲೈನ್ ಗೇಮಿಂಗ್ ಮೂಲಕ ಸಚಿನ್ ಎಂಬುವವರನ್ನು ಭೇಟಿಯಾಗಿದ್ದರು. ಬಳಿಕ ಅವರ ಸ್ನೇಹ ಪ್ರೀತಿಗೆ ಚಿಗುರಿತ್ತು. ಇದನ್ನೂ ಓದಿ: ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ರಾ ಪ್ರಭಾವಿ ಸಚಿವ?- ಸಿಡಿ ರಾಜಕಾರಣಕ್ಕೆ ಕಾಂಗ್ರೆಸ್ ನಾಯಕರ ಆಕ್ರೋಶ
ಸೀಮಾಗೆ ಆಗಲೇ ಮದುವೆಯಾಗಿ ನಾಲ್ಕು ಮಕ್ಕಳಿದ್ದರು. ಪ್ರೀತಿಸಿದವನಿಗಾಗಿ ಸೀಮಾ ಗಂಡನನ್ನು ಬಿಟ್ಟು ಮಕ್ಕಳನ್ನು ಕರೆದುಕೊಂಡು ಭಾರತಕ್ಕೆ ಬಂದು ಸಚಿನ್ ಮೀನಾರನ್ನು ಮದುವೆಯಾಗಿದ್ದರು. ಕಳೆದ ವರ್ಷ ತಾನು ಗರ್ಭಿಣಿಯಾಗಿರುವ ಬಗ್ಗೆ ಸೀಮಾ ವಿಡಿಯೋ ಮೂಲಕ ಹೇಳಿಕೊಂಡಿದ್ದರು. ಇದನ್ನೂ ಓದಿ: ತುಮಕೂರು| ಜಯಮಂಗಲಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು