ಮೈಸೂರು: ಗೃಹಲಕ್ಷ್ಮಿ ಯೋಜನೆ ಹಣದಿಂದ (Gruhalakshmi Scheme Money) ಪೆಟ್ರೋಲ್ ಮತ್ತು ಇಸ್ಪೀಟ್ ಕಾರ್ಡ್ ಮಾರಾಟ ಮಾಡ್ತಿದ್ದಿನಿ ಎಂದು ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಆದ್ರೆ ಇಸ್ಪೀಟ್ ಮಾರಾಟ ಮಾಡ್ತೀದ್ದೀನಿ ಎಂಬ ಮಹಿಳೆ ಹೇಳಿಕೆ ಕೇಳಿ ಮೈಸೂರು ಜಿಲ್ಲೆಯ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅರೆ ಕ್ಷಣ ಗಾಬರಿಯಾಗಿದ್ದಾರೆ.
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಈ ಘಟನೆ ನಡೆದಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲ್ಲೂಕು ಸಮಿತಿ ಶಾಸಕ ದರ್ಶನ್ ಧ್ರುವನಾರಾಯಣ್ (Darshan Dhruvanarayan) ಅಧ್ಯಕ್ಷತೆಯಲ್ಲಿ ನಡೆಯಿತು. ಇದನ್ನೂ ಓದಿ: ರಾಣಾ ಇರೋ ಸೆಲ್‌ಗೆ 12 ಅಧಿಕಾರಿಗಳಿಗೆ ಮಾತ್ರ ಪ್ರವೇಶ – ಕೋಟೆಯಾಗಿ ಬದಲಾದ NIA ಕಚೇರಿ
ಈ ವೇಳೆ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಮಾತನಾಡಿದ ಇಂದಿರಾನಗರ ಗ್ರಾಮದ ಮಹಿಳೆ. ಗೃಹಲಕ್ಷ್ಮಿ ಯೋಜನೆ ಹಣದಿಂದ ಸಾಕಷ್ಟು ಸಹಾಯವಾಗಿದೆ. ಗೃಹಲಕ್ಷ್ಮಿ ಹಣದಿಂದ ಪೆಟ್ಟಿ ಅಂಗಡಿ ಇಟ್ಟುಕೊಂಡು ಮನೆಯ ವ್ಯವಹಾರ ಮಾಡಿಕೊಂಡಿದ್ದೇನೆ. ಇದರಿಂದ ಬಂದ ಲಾಭದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ಸಹಾಯವಾಗಿದೆ. ಪೆಟ್ರೋಲ್ (Petrol) ಮತ್ತು ಇಸ್ಪೀಟ್ ಕಾರ್ಡ್ ಮಾರಾಟ ಮಾಡುತ್ತಿದ್ದೇನೆ ಎಂದ ಮಹಿಳೆ ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದವರ ಮೇಲೆ ಎಫ್‌ಐಆರ್