ಮ್ಯಾಂಚೆಸ್ಟರ್: ಇಂದಿನಿಂದ ವಿಶ್ವಕಪ್‍ನ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ಇಂದು ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಪಂದ್ಯ ಆಡಲಿದೆ.
ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ನೋಡಲು ಎರಡೂ ತಂಡದ ಅಭಿಮಾನಿಗಳು ಸೇರಿದಂತೆ ಇಡೀ ವಿಶ್ವವೇ ಕಾದು ಕುಳಿತಿದೆ. ಇತ್ತ ಎರಡೂ ತಂಡಗಳು ಬಲಿಷ್ಠವಾಗಿದ್ದು, ರನ್‍ಗಳ ಸುರಿಮಳೆ ಸುರಿಯಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇಂದಿನ ಪಂದ್ಯಕ್ಕೆ ಮಳೆರಾಯನ ಭೀತಿ ಎದುರಾಗಿದೆ.
Advertisement
Advertisement
ಶನಿವಾರ ನಡೆದ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತ್ತು. ಇತ್ತ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 10 ರನ್‍ಗಳಿಂದ ಗೆದ್ದುಕೊಂಡಿತ್ತು. ಹೀಗಾಗಿ ಗುಂಪಿನಲ್ಲಿ ಅಗ್ರ ಸ್ಥಾನದಲ್ಲಿ ಇರುವ ಭಾರತ ಇಂದು ನಾಲ್ಕನೇಯ ಸ್ಥಾನದಲ್ಲಿ ಇರುವ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇದನ್ನೂ ಓದಿ: ಟೀಂ ಇಂಡಿಯಾ ವರ್ಸಸ್ ಕಿವೀಸ್ ಪಂದ್ಯ ಮಳೆಯಿಂದ ರದ್ದಾದ್ರೆ ಏನಾಗುತ್ತೆ?
Advertisement
Advertisement
ಲಿಂಗ್ ಹಂತದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಬೇಕಿದ್ದ ಪಂದ್ಯ ಮಳೆಯಿಂದಾಗಿ ಒಂದು ಎಸೆತ ಕಾಣದೇ ರದ್ದಾಗಿತ್ತು. ಹೀಗಾಗಿ 2 ತಂಡಗಳಿಗೆ ಒಂದೊಂದು ಅಂಕವನ್ನು ಹಂಚಿಕೆ ಮಾಡಲಾಗಿತ್ತು.
ಗುರುವಾರ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಲೀಗ್ ಹಂತದ ಎಲ್ಲ ಪಂದ್ಯಗಳು ಶನಿವಾರಕ್ಕೆ ಮುಕ್ತಾಯವಾಗಿದ್ದು, ಭಾರತ 9 ಪಂದ್ಯಗಳಿಂದ 15 ಅಂಕ ಸಂಪಾದಿಸಿದರೆ, ಆಸ್ಟ್ರೇಲಿಯಾ 14 ಅಂಕ, ಇಂಗ್ಲೆಂಡ್ 12 ಅಂಕ, ನ್ಯೂಜಿಲೆಂಡ್ 11 ಅಂಕ ಗಳಿಸಿದೆ.