– ದೇಹ ಹೊಕ್ಕಿದ 5 ಗುಂಡು, ಶಿವಸೇನಾ ನಾಯಕನ ಸ್ಥಿತಿ ಗಂಭೀರ
ಮುಂಬೈ: ಬಿಜೆಪಿ (BJP) ಶಾಸಕರೊಬ್ಬರು ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರ ಶಿವಸೇನೆ (Shiv Sena) ಬಣದ ನಗರ ಅಧ್ಯಕ್ಷರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಮಹೇಶ್ ಗಾಯಕ್ವಾಡ್ ಮೇಲೆ ಗಣಪತ್ ಗಾಯಕ್ವಾಡ್ ಗುಂಡು ಹಾರಿಸಿದ್ದಾರೆ. ಮುಂಬೈನಲ್ಲಿ (Mumbai) ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಶಾಸಕನನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಲ್‌ಕೆ ಅಡ್ವಾಣಿಗೆ ಭಾರತ ರತ್ನ : ನರೇಂದ್ರ ಮೋದಿ ಘೋಷಣೆ
Advertisement
Advertisement
ಮುಂಬೈನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಕಲ್ಯಾಣ್‌ನ ಕಲ್ಯಾಣ್ ಪೂರ್ವ ಕ್ಷೇತ್ರವನ್ನು ಗಣಪತ್ ಗಾಯಕ್ವಾಡ್ ಪ್ರತಿನಿಧಿಸುತ್ತಾರೆ. ಶಿಂಧೆ ಅವರ ಶಿವಸೇನೆ ಬಣವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದೆ.
Advertisement
ಗುಂಡಿನ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸುಧಾಕರ ಪಠಾರೆ ತಿಳಿಸಿದ್ದಾರೆ. ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಗೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಉಭಯ ಕಡೆಯವರು ಬಂದಿದ್ದರು. ಆದರೆ ಜೋರು ಮಾತುಕತೆ ವೇಳೆ ಶಾಸಕ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಶಿವಸೇನಾ ನಾಯಕ ಮತ್ತು ಮತ್ತೊಬ್ಬ ಬೆಂಬಲಿಗನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: ಪೂನಂ ಪಾಂಡೆ ಸಾವಿನ ಸುತ್ತ ಭಾರೀ ಅನುಮಾನದ ಹುತ್ತ
ಮಹೇಶ್ ದೇಹದಿಂದ ಐದು ಗುಂಡುಗಳನ್ನು ಹೊರತೆಗೆಯಲಾಗಿದೆ. ಆದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಮಹೇಶ್ ಗಾಯಕ್ವಾಡ್ ಅವರು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾದ ಜಮೀನಿಗೆ ಸಂಬಂಧಿಸಿದಂತೆ ಸಮಸ್ಯೆಯಾಗಿದೆ. ಆತ ನನ್ನ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ್ದರಿಂದ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆ ಎಂದು ಆರೋಪಿ ಹೇಳಿದ್ದಾರೆ.
ಮಹೇಶ್ ಗಾಯಕ್ವಾಡ್ ಮತ್ತು ಗಣಪತ್ ಗಾಯಕ್ವಾಡ್ ಇಬ್ಬರಿಗೂ ಕೆಲವು ವಿವಾದಗಳಿವೆ. ಅವರು ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ಬಂದಿದ್ದರು. ಆದರೆ ಗಣಪತ್ ಗಾಯಕ್ವಾರ್ಡ್ ಮಾತುಕತೆಯ ಸಮಯದಲ್ಲಿ ಮಹೇಶ್ ಗಾಯಕ್ವಾಡ್ ಮತ್ತು ಅವರ ಸಹಚರರ ಮೇಲೆ ಗುಂಡು ಹಾರಿಸಿದರು. ಇಬ್ಬರೂ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್‌ಗೆ ಹಂದಿ ಜ್ವರ & ಕೋವಿಡ್ ಪಾಸಿಟಿವ್
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸರ್ಕಾರವನ್ನು ಶಿವಸೇನೆಯ ಉದ್ಧವ್ ಠಾಕ್ರೆ ಬಣ ತರಾಟೆಗೆ ತೆಗೆದುಕೊಂಡಿದೆ. ಪೊಲೀಸ್ ಠಾಣೆಯೊಳಗೆ ಬಿಜೆಪಿ ಶಾಸಕ ಗುಂಡಿನ ದಾಳಿ ನಡೆಸಿದ್ದು, ಗುಂಡು ತಗುಲಿದ ವ್ಯಕ್ತಿ ಮುಖ್ಯಮಂತ್ರಿ ಹಾಗೂ ಮಾಜಿ ಕಾರ್ಪೋರೇಟರ್ ಆಪ್ತರು. ಅವರಿಬ್ಬರೂ ಅಧಿಕಾರದಲ್ಲಿದ್ದಾರೆ ಎಂದರೆ ಈ ಜನರಿಗೆ ಕಾನೂನಿನ ಭಯವಿಲ್ಲ ಎಂಬುದನ್ನು ಅರ್ಥಮಾಡಿಸಬೇಕೇ? ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಉದ್ಧವ್ ಬಣದ ವಕ್ತಾರ ಆನಂದ್ ದುಬೆ ಆರೋಪಿಸಿದ್ದಾರೆ.