– ಕಾಮೆಂಟ್ಸ್ ಡಿಲೀಟ್ ಮಾಡಿ ತಲೆಮರೆಸಿಕೊಂಡಿರೋ ಅನೇಕ ಆರೋಪಿಗಳು
ಬೆಂಗಳೂರು: ನಟಿ ರಮ್ಯಾಗೆ (Actress Ramya) ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಮತ್ತಷ್ಟು ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ. ನಟಿಗೆ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.
ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ 9 ಮಂದಿ ಆರೋಪಿಗಳನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನ ಬಂಧನ ಮಾಡಿದ್ದಾರೆ. ಬಂಧಿತ ಇಬ್ಬರು ಕೂಡ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಮತ್ತಿಬ್ಬರ ಬಂಧನ, ಒಟ್ಟು 9 ಯುವಕರು ಅರೆಸ್ಟ್
ನಟಿ ರಮ್ಯಾ ದೂರಿನಲ್ಲಿ ಸುಮಾರು 40 ಕ್ಕೂ ಅಧಿಕ ಅಕೌಂಟ್‌ಗಳ ಡಿಟೈಲ್ಸ್ ಕೊಟ್ಟಿದ್ದು. 12 ಅಕೌಂಟ್‌ಗಳ ಮಾಹಿತಿ ಪಡೆದು 12 ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಮತ್ತೆ 10 ಕ್ಕೂ ಹೆಚ್ಚು ಮಂದಿಯ ಇನ್ಸ್ಟಾಗ್ರಾಂ ಖಾತೆಯ ಮಾಹಿತಿ ಪಡೆದಿದ್ದು, ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಕೆಲವರು ಕೋರ್ಟ್ ಮೊರೆ ಹೋಗಿದ್ದು, ಉಳಿದ ಕೆಲವರು ಅಕೌಂಟ್‌ನಲ್ಲಿ ಹಾಕಿದ್ದ ಕಾಮೆಂಟ್‌ಗಳನ್ನ ಡಿಲೀಟ್ ಮಾಡಿಕೊಂಡು ತಲೆಮರಿಸಿಕೊಂಡಿದ್ದಾರೆ. ಹಾಗಾಗಿ, ಆರೋಪಿತರ ಟವರ್ ಲೊಕೇಷನ್‌ಗಳನ್ನ ಪತ್ತೆ ಮಾಡಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ