ಅಬುಜಾ: ಪಶ್ಚಿಮ ಸೆನೆಗಲ್‍ನ ಟಿವೌವಾನ್‍ನಲ್ಲಿರುವ ಮೇಮ್ ಅಬ್ದೌ ಅಜೀಜ್ ಸೈ ದಬಖ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಹನ್ನೊಂದು ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಪಶ್ಚಿಮ ಆಫ್ರಿಕಾದ ಅಧ್ಯಕ್ಷರು ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅಧ್ಯಕ್ಷ ಮ್ಯಾಕಿ ಸಾಲ್ ಅವರು, ಸಾರ್ವಜನಿಕ ಆಸ್ಪತ್ರೆಯ ನವಜಾತ ಶಿಶುಗಳ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡು 11 ನವಜಾತ ಶಿಶುಗಳು ಸಾವನ್ನಪ್ಪಿರುವುದು ನನಗೆ ನೋವು ಮತ್ತು ನಿರಾಶೆಯನ್ನುಂಟು ಮಾಡಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುವುದರ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಇತ್ತೀಚಿನ ದಿನಗಳಲ್ಲಿ ಬೆಂಕಿ ಅವಘಡಗಳು ಹೆಚ್ಚಾಗುತ್ತಿದ್ದು, ದೇಶವು ಈ ಪರಿಸ್ಥಿತಿಯನ್ನು ಎದುರಿಸುತ್ತದೆ. ಮಗುವಿನ ತಾಯಂದಿರಿಗೆ ಮತ್ತು ಅವರ ಕುಟುಂಬಸ್ಥರಿಗೆ ನಾನು ಸಂತಾಪವನ್ನು ಸೂಚಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ರಾಜ್ಯಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ
Advertisement
Advertisement
ಇದೇ ವಿಚಾರವಾಗಿ ಮಾತನಾಡಿದ ಸೆನೆಗಲ್‍ನ ನಗರದ ಮೇಯರ್ ಡೆಂಬಾ ಡಿಯೋಪ್ ಸೈ ಅವರು, ಟಿವೌವಾನ್‍ನ ಸಾರಿಗೆ ಕೇಂದ್ರದಲ್ಲಿರುವ ಮಾಮ್ ಅಬ್ದೌ ಅಜೀಜ್ ಸೈ ದಬಾಖ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರಂತ ಸಂಭವಿಸಿದೆ. ಅಲ್ಲದೇ ಬೆಂಕಿ ಬಹಳ ಬೇಗ ಹೊತ್ತಿಕೊಂಡಿತ್ತು. ಆದರೆ ಘಟನೆ ವೇಳೆ ಮೂರು ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಟಿದರ್ ಸ್ಫೋಟಕ ಶತಕ, ಡಿ.ಕೆ ಅಬ್ಬರ – ಅಹಮದಾಬಾದ್‌ಗೆ ಹಾರಿದ ಬೆಂಗ್ಳೂರು
Advertisement