ಬೆಂಗಳೂರು: 14 ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ರಮೇಶ್ ಕುಮಾರ್ ನಿರ್ಧಾರ ಕಾನೂನು ಬಾಹಿರವಾಗಿದೆ ಎಂದು ಹಿರಿಯ ವಕೀಲ ಬಿ.ವಿ.ಆಚಾರ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಹಿರಿಯ ವಕೀಲರು, ರಾಜೀನಾಮೆಯನ್ನು ಮಾತ್ರ ಅಂಗೀಕಾರ ಮಾಡಿ ಎಂದು ಸುಪ್ರೀಂಕೋರ್ಟ್ ಹೇಳಿತ್ತೇ ಹೊರತು ಅನರ್ಹತೆ ಬಗ್ಗೆ ತಿಳಿಸಿರಲಿಲ್ಲ. ಅಷ್ಟೇ ಅಲ್ಲದೆ ರಾಜೀನಾಮೆಯನ್ನು ಕೈಬಿಟ್ಟು ಅನರ್ಹತೆ ಗೊಳಿಸಿದ್ದಾರೆ. ಇಂತಹ ಪ್ರಕರಣಗಳಲ್ಲಿ ರಾಜೀನಾಮೆಯನ್ನು ಮೊದಲು ಅಂಗೀಕಾರ ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರೇ ನಮ್ಮನ್ನು ಪ್ರಚೋದಿಸಿ ರಾಜೀನಾಮೆ ಕೊಡಿಸಿದ್ದು: ಮುನಿರತ್ನ
Advertisement
ಕಾನೂನಿನ ಪ್ರಕಾರ ಅನರ್ಹತೆಗೆ ಒಂದು ವಾರದ ಕಾಲಾವಕಾಶ ನೀಡಬೇಕಿತ್ತು. ಆದರೆ ಸ್ಪೀಕರ್ ಮೂರು ದಿನಗಳಲ್ಲಿ ದಿಢೀರನೆ ಅನರ್ಹತೆ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಅತೃಪ್ತ ಶಾಸಕರು ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ, ಆದೇಶವನ್ನು ತಡೆಹಿಡಿಯುವ ಅವಕಾಶವಿದೆ ಎಂದರು.
Advertisement
Advertisement
ಶನಿವಾರ ಹಾಗೂ ಭಾನವಾರ ರಜೆ ಇದ್ದರೂ ಕಚೇರಿಯಲ್ಲಿ ಕುಳಿತು ತರಾತುರಿಯಲ್ಲಿ ಅನರ್ಹತೆ ಆದೇಶ ಹೊರಡಿಸಿದ್ದಾರೆ. ಅದೇ ಶಾಸಕರು ರಾಜೀನಾಮೆ ಸ್ವೀಕರಿಸುವಾಗ ರಜೆ ಇದೆ, ಖಾಸಗಿ ಕಾರ್ಯಕ್ರಮದ ಅಂತ ಹೇಳಿ ವಿಳಂಬ ನೀತಿ ಅನುಸರಿದರು. ಈ ಮೂಲಕ ಮೈತ್ರಿ ಸರ್ಕಾರಕ್ಕೆ ಅನುಕೂಲವಾಗುವಂತೆ ನಡೆದುಕೊಂಡರು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಲ್ ಪಾಸಾಗಿಲ್ಲ ಅಂದ್ರೆ ಒಂದು ನಯಾ ಪೈಸೆ ಡ್ರಾ ಆಗಲ್ಲ: ಸ್ಪೀಕರ್ ಗರಂ
Advertisement
ಸ್ಪೀಕರ್ ರಮೇಶ್ ಕುಮಾರ್ ಒಂದು ರೀತಿಯಲ್ಲಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಶಾಸಕರ ಅನರ್ಹತೆಯಿಂದ ವಿಧಾನಸಭೆಯ ಸಂಖ್ಯಾಬಲ ಕಡಿಮೆಯಾಗಿದೆ. ಹೀಗಾಗಿ ಬಿಜೆಪಿಯವರು ಯಾರ ಸಹಾಯವಿಲ್ಲದೇ ವಿಶ್ವಾಸಮತ ಸಾಬೀತು ಮಾಡುತ್ತಾರೆ ಎಂದರು.
ಶಾಸಕರನ್ನು 2023ರ ವರೆಗೆ ಅನರ್ಹತೆ ಮಾಡಲಾಗಿದೆ ಎಂದು ಸ್ಪೀಕರ್ ಹೇಳುತ್ತಾರೆ. ಇದು ಅಸಂವಿಧಾನಿಕವಾಗಿದೆ. ಕಾನೂನಿನ ಪ್ರಕಾರ ಅನರ್ಹಗೊಂಡ ಶಾಸಕ ಮುಂದಿನ ಉಪ ಚುನಾಮಣೆ ಇಲ್ಲವೇ, ಮುಖ್ಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು. ಸ್ಪೀಕರ್ ಅವರು ಶಾಸಕರನ್ನು ಹೆದರಿಸುವ ತಂತ್ರವನ್ನು ಹೂಡುತ್ತಾ ಬಂದಿದ್ದಾರೆ ಎನ್ನುವ ವಾದಕ್ಕೆ ಸಾಂದರ್ಭಿಕ ಸಾಕ್ಷಿ ಸಿಗುತ್ತದೆ. ಮೊನ್ನೆಯಷ್ಟೇ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದರು. ಈ ಮೂಲಕ ಮೈತ್ರಿ ಪಕ್ಷಕ್ಕೆ ಬೆಂಬಲ ನೀಡುವಂತೆ ಬಿಸಿ ಮುಟ್ಟಿಸಿದ್ದರು ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ. ಅವರ ತಂತ್ರ ವಿಫಲವಾಗಿದ್ದರಿಂದ ಇಂದು 14 ಜನರನ್ನೂ ಅನರ್ಹಗೊಳಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಯಾವ ಕಾನೂನಿನಡಿಯಲ್ಲಿ ಅನರ್ಹ ಮಾಡಿದ್ರಿ: ಶೋಭಾ ಕರಂದ್ಲಾಜೆ ಪ್ರಶ್ನೆ
ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹಗೊಂಡ ಶಾಸಕರು ಹೈಕೋರ್ಟ್ ಇಲ್ಲವೇ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಬಹುದು. ಈ ಮೂಲಕ ಆದೇಶಕ್ಕೆ ತಡೆತಂದು ಮತ್ತೆ ಕಲಾಪದಲ್ಲಿ ಭಾಗವಹಿಸಬಹುದು. ರೆಬೆಲ್ ಶಾಸಕರು ವಿಪ್ ಉಲ್ಲಂಘನೆ ಮಾಡಿದ್ದಾರೆ ಎಂದು ಪ್ರಸ್ತಾಪಿಸಿದ್ದಾರೆ. ಆದರೆ ಸುಪ್ರೀಂಕೋರ್ಟ್ ಶಾಸಕರ ಮೇಲೆ ಒತ್ತಡ ಹಾಕುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರೂ ಕಾಂಗ್ರೆಸ್ ನಾಯಕರು ವಿಪ್ ಜಾರಿ ಮಾಡಿದ್ದಾರೆ. ಈ ಮೂಲಕ ಸ್ಪೀಕರ್ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದರು.
ಅತೃಪ್ತ ಶಾಸಕರಿಗೆ ಬಿಜೆಪಿಯು ಸಚಿವ ಸ್ಥಾನ ನೀಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಹಿರಿಯ ವಕೀಲರು, ಕೊಟ್ಟರೆ ಏನು ತಪ್ಪು? ಮಂತ್ರಿಗಿರಿ ನೀಡಿದರೆ ಪ್ರಳಯವಾಗಲ್ಲ ಬಿಡಿ. ಮಂತ್ರಿಗಿರಿಗಾಗಿಯೇ ಅವರು ರಾಜೀನಾಮೆ ನೀಡಿದ್ದರೆ ತಪ್ಪು. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ವಿಪಕ್ಷಕ್ಕೆ ಬೆಂಬಲ ನೀಡುವ ಉದ್ದೇಶದಿಂದ ರಾಜೀನಾಮೆ ನೀಡುವುದು ಸರಿ ಎಂದು ಅಭಿಪ್ರಾಯಪಟ್ಟರು.