ದರ್ಶನ್‌ ಗ್ಯಾಂಗ್‌ನಿಂದ ಹತ್ಯೆ ಕೇಸ್;‌ ಸರ್ಕಾರದ ಎಸ್‌ಪಿಪಿಯಾಗಿ ಪ್ರಸನ್ನಕುಮಾರ್‌ ನೇಮಕ

Public TV
1 Min Read
prasanna kumar darshan case

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಪ್ರಕರಣವನ್ನು ನಡೆಸಲು ಸರ್ಕಾರದ ವಿಶೇಷ ಅಭಿಯೋಜಕರಾಗಿ (SPP) ಹಿರಿಯ ವಕೀಲ ಪ್ರಸನ್ನಕುಮಾರ್‌ ಅವರನ್ನು ನೇಮಿಸಲಾಗಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಪ್ರಕರಣದಲ್ಲಿ ಸಂಬಂಧಪಟ್ಟ ವಿಚಾರಣಾ ಮತ್ತು ಜಿಲ್ಲಾ ಸತ್ರ ನ್ಯಾಯಾಲಯಗಳಲ್ಲಿ ಹಾಜರಾಗಲು ಹಾಗೂ ಪ್ರಕರಣವನ್ನು ನಡೆಸಲು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ದರ್ಶನ್‌ಗೆ ಹೆಣ್ಣು-ಹೆಂಡದ ನಶೆ ಹೆಚ್ಚಾಗಿತ್ತು, ಸಂಸ್ಕಾರ ಇರಲಿಲ್ಲ: ಮೊದಲ ಗುರು ಅಡ್ಡಂಡ ಕಾರ್ಯಪ್ಪ

Darshan 7

ಜೂ.9 ರಂದು ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರನ್ನೂ ಇಂದು ಕೋರ್ಟ್‌ಗೆ ಹಾಜರುಪಡಿಸಲಾಗುತ್ತಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂದು ರೇಣುಕಾಸ್ವಾಮಿಯನ್ನು ಶೆಡ್‌ವೊಂದಕ್ಕೆ ಕರೆತಂದು ಹಲ್ಲೆ ನಡೆಸಲಾಗಿತ್ತು. ಗಂಭೀರ ಹಲ್ಲೆಯಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಪ್ರಕರಣ ಮುಚ್ಚಿಹಾಕಲು ಪ್ರಯತ್ನ ನಡೆದಿತ್ತು. ಮೃತದೇಹ ವಿಲೇವಾರಿ ಮಾಡಲು ಮತ್ತು ದರ್ಶನ್‌ ಹೆಸರು ಬಾಯಿಬಿಡದಿರಲು ಕೆಲವರಿಗೆ 30 ಲಕ್ಷ ರೂ. ಹಣ ನೀಡಲಾಗಿತ್ತು. ಪ್ರಕರಣ ಭೇದಿಸಿದ ಪೊಲೀಸರು ದರ್ಶನ್‌ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರೀಲ್ ಗಜನ ಪಳಗಿಸಿದ ರಿಯಲ್ ಸಲಗ | ಆಪರೇಷನ್‌ ’36’ ಸೂಪರ್ ಕಾಪ್ಸ್ – ಸೂಪರ್ ಸ್ಟೋರಿ ಓದಿ

Share This Article